ಯೆಶಾಯ 6 : 1 (IRVKN)
{ಯೆಶಾಯನಿಗೆ ಯೆಹೋವನ ಕರೆ} [PS] ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
ಯೆಶಾಯ 6 : 2 (IRVKN)
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. [PE][PS]
ಯೆಶಾಯ 6 : 3 (IRVKN)
ಆಗ ಒಬ್ಬನು ಮತ್ತೊಬ್ಬನಿಗೆ, [QBR] “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. [PE][PS]
ಯೆಶಾಯ 6 : 4 (IRVKN)
ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
ಯೆಶಾಯ 6 : 5 (IRVKN)
ಆಗ ನಾನು, [QBR] “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. [QBR] ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. [QBR] ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, [PE][PS]
ಯೆಶಾಯ 6 : 6 (IRVKN)
ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
ಯೆಶಾಯ 6 : 7 (IRVKN)
ನನ್ನ ಬಾಯಿಗೆ ಮುಟ್ಟಿಸಿ, [QBR] “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. [PE][PS]
ಯೆಶಾಯ 6 : 8 (IRVKN)
ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು. [QBR]
ಯೆಶಾಯ 6 : 9 (IRVKN)
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, [QBR] ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, [QBR]
ಯೆಶಾಯ 6 : 10 (IRVKN)
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, [QBR] ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. [PE][PS]
ಯೆಶಾಯ 6 : 11 (IRVKN)
ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, [QBR] “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, [QBR] ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. [QBR]
ಯೆಶಾಯ 6 : 12 (IRVKN)
ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು. [QBR]
ಯೆಶಾಯ 6 : 13 (IRVKN)
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. [QBR] ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, [QBR] ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು. [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: