ಯೆಶಾಯ 62 : 1 (IRVKN)
{ಯೆರೂಸಲೇಮಿಗಾಗಿ ಯೆಶಾಯನ ಪ್ರಾರ್ಥನೆ} [PS] ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, [QBR] ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು. [QBR]
ಯೆಶಾಯ 62 : 2 (IRVKN)
ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; [QBR] ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು. [QBR]
ಯೆಶಾಯ 62 : 3 (IRVKN)
ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ. [QBR]
ಯೆಶಾಯ 62 : 4 (IRVKN)
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; [QBR] ನೀನು “ನನ್ನ ಉಲ್ಲಾಸಿನಿ [* ಉಲ್ಲಾಸಿನಿ ಎಫ್ಸಿಬ್.] ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ [† ವಿವಾಹಿತೆ ಬ್ಯೂಲ್. ] ” ಎಂಬ ಹೆಸರಾಗುವುದು; [QBR] ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. [‡ ನಿನ್ನ ಸೀಮೆಗೆ ವಿವಾಹವಾಗುವುದು. ನೀನು ನಿನ್ನ ದೇಶಕ್ಕೆ ಮದಲಿಂಗಿತ್ತಿಯಂತೆ ಇರುವಿ.] [QBR]
ಯೆಶಾಯ 62 : 5 (IRVKN)
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು [§ ಮಕ್ಕಳು ನಿನ್ನನ್ನು ಉಂಟುಮಾಡಿದವನು.] ನಿನ್ನನ್ನು ವರಿಸುವರು; [QBR] ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. [QBR]
ಯೆಶಾಯ 62 : 6 (IRVKN)
ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; [QBR] ಅವರು ಹಗಲೂ, ಇರುಳೂ ಮೌನವಾಗಿರರು. [QBR] ಯೆಹೋವನನ್ನು ಸ್ಮರಿಸುವವರೇ, [QBR]
ಯೆಶಾಯ 62 : 7 (IRVKN)
ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ. [QBR]
ಯೆಶಾಯ 62 : 8 (IRVKN)
ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, [QBR] “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ; [QBR]
ಯೆಶಾಯ 62 : 9 (IRVKN)
ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. [QBR] ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ. [QBR]
ಯೆಶಾಯ 62 : 10 (IRVKN)
ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, [QBR] ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. [QBR] ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ! [QBR]
ಯೆಶಾಯ 62 : 11 (IRVKN)
“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” [QBR] ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. [QBR]
ಯೆಶಾಯ 62 : 12 (IRVKN)
ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, [* ವರಿಸಿ, ಅಥವಾ ಪ್ರೀತಿಸಿ.] ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು. [PE]

1 2 3 4 5 6 7 8 9 10 11 12

BG:

Opacity:

Color:


Size:


Font: