ಯೆಶಾಯ 7 : 1 (IRVKN)
ಆಹಾಜನಿಗೆ ಯೆಶಾಯನ ಬೋಧನೆ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
ಯೆಶಾಯ 7 : 2 (IRVKN)
ಅರಾಮ್ಯರು ಎಫ್ರಾಯೀಮ್ಯರೊಂದಿಗೆ* ಎಫ್ರಾಯೀಮ್ಯರೊಂದಿಗೆ ಅಂದರೆ ಇಸ್ರಾಯೇಲ್ಯರ ಉತ್ತರ ರಾಜ್ಯ. ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
ಯೆಶಾಯ 7 : 3 (IRVKN)
ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
ಯೆಶಾಯ 7 : 4 (IRVKN)
‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’ ”
ಯೆಶಾಯ 7 : 5 (IRVKN)
ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
ಯೆಶಾಯ 7 : 6 (IRVKN)
“ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
ಯೆಶಾಯ 7 : 7 (IRVKN)
ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
ಯೆಶಾಯ 7 : 8 (IRVKN)
ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
ಯೆಶಾಯ 7 : 9 (IRVKN)
ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
ಯೆಶಾಯ 7 : 10 (IRVKN)
ಇಮ್ಮಾನುವೇಲನ ಮುಂಗುರುತು ಮತ್ತೆ ಯೆಹೋವನು ಆಹಾಜನಿಗೆ,
ಯೆಶಾಯ 7 : 11 (IRVKN)
“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.
ಯೆಶಾಯ 7 : 12 (IRVKN)
ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
ಯೆಶಾಯ 7 : 13 (IRVKN)
ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
ಯೆಶಾಯ 7 : 14 (IRVKN)
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
ಯೆಶಾಯ 7 : 15 (IRVKN)
ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
ಯೆಶಾಯ 7 : 16 (IRVKN)
“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
ಯೆಶಾಯ 7 : 17 (IRVKN)
ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
ಯೆಶಾಯ 7 : 18 (IRVKN)
ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
ಯೆಶಾಯ 7 : 19 (IRVKN)
ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
ಯೆಶಾಯ 7 : 20 (IRVKN)
ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
ಯೆಶಾಯ 7 : 21 (IRVKN)
ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
ಯೆಶಾಯ 7 : 22 (IRVKN)
ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
ಯೆಶಾಯ 7 : 23 (IRVKN)
ಆಗ ಸಾವಿರ ರೂಪಾಯಿ ಸಾವಿರ ರೂಪಾಯಿ ಅಂದರೆ 11.5 ಕಿಲೋಗ್ರಾಂ. ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
ಯೆಶಾಯ 7 : 24 (IRVKN)
ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
ಯೆಶಾಯ 7 : 25 (IRVKN)
ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25