ಯೆಶಾಯ 9 : 1 (IRVKN)
{ನಮಗಾಗಿ ಒಂದು ಮಗುವು ಹುಟ್ಟಿತು} [PS] ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. [QBR] ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, [QBR] ಆತನು ಅವಮಾನಕ್ಕೆ ಗುರಿಮಾಡಿದನು. [QBR] ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ. [QBR]
ಯೆಶಾಯ 9 : 2 (IRVKN)
ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. [QBR] ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು. [QBR]
ಯೆಶಾಯ 9 : 3 (IRVKN)
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. [QBR] ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, [QBR] ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ. [QBR]
ಯೆಶಾಯ 9 : 4 (IRVKN)
ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, [QBR] ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ. [QBR]
ಯೆಶಾಯ 9 : 5 (IRVKN)
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, [QBR] ರಕ್ತದಲ್ಲಿ ಅದ್ದಿದ ಉಡುಪುಗಳೂ, [QBR] ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು. [QBR]
ಯೆಶಾಯ 9 : 6 (IRVKN)
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, [QBR] ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; [QBR] ಅದ್ಭುತ ಸ್ವರೂಪನು, ಆಲೋಚನಾ ಕರ್ತನು, [QBR] ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, [QBR] ಸಮಾಧಾನದ ಪ್ರಭು ಎಂಬುದು ಆತನ ಹೆಸರು. [QBR]
ಯೆಶಾಯ 9 : 7 (IRVKN)
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. [QBR] ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ [QBR] ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. [QBR] ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಯೆಶಾಯ 9 : 8 (IRVKN)
{ಇಸ್ರಾಯೇಲರ ವಿರುದ್ಧ ಯೆಹೋವನ ಕೋಪ} [PS] ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು. [QBR]
ಯೆಶಾಯ 9 : 9 (IRVKN)
ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ, [QBR]
ಯೆಶಾಯ 9 : 10 (IRVKN)
“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ. [QBR]
ಯೆಶಾಯ 9 : 11 (IRVKN)
ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ. [QBR]
ಯೆಶಾಯ 9 : 12 (IRVKN)
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. [QBR] ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. [QBR]
ಯೆಶಾಯ 9 : 13 (IRVKN)
ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ. [QBR]
ಯೆಶಾಯ 9 : 14 (IRVKN)
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು. [QBR]
ಯೆಶಾಯ 9 : 15 (IRVKN)
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. [QBR]
ಯೆಶಾಯ 9 : 16 (IRVKN)
ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ. [QBR]
ಯೆಶಾಯ 9 : 17 (IRVKN)
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. [QBR] ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. [QBR] ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. [QBR]
ಯೆಶಾಯ 9 : 18 (IRVKN)
ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, [QBR] ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ. [QBR]
ಯೆಶಾಯ 9 : 19 (IRVKN)
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. [QBR] ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ. [QBR]
ಯೆಶಾಯ 9 : 20 (IRVKN)
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. [QBR] ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು. [QBR]
ಯೆಶಾಯ 9 : 21 (IRVKN)
ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. [QBR] ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು. [PE]
❮
❯