ಯೆಶಾಯ 9 : 1 (IRVKN)
ನಮಗಾಗಿ ಒಂದು ಮಗುವು ಹುಟ್ಟಿತು ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
ಯೆಶಾಯ 9 : 2 (IRVKN)
ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
ಯೆಶಾಯ 9 : 3 (IRVKN)
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
ಯೆಶಾಯ 9 : 4 (IRVKN)
ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
ಯೆಶಾಯ 9 : 5 (IRVKN)
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
ಯೆಶಾಯ 9 : 6 (IRVKN)
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
ಯೆಶಾಯ 9 : 7 (IRVKN)
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಯೆಶಾಯ 9 : 8 (IRVKN)
ಇಸ್ರಾಯೇಲರ ವಿರುದ್ಧ ಯೆಹೋವನ ಕೋಪ ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
ಯೆಶಾಯ 9 : 9 (IRVKN)
ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
ಯೆಶಾಯ 9 : 10 (IRVKN)
“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
ಯೆಶಾಯ 9 : 11 (IRVKN)
ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
ಯೆಶಾಯ 9 : 12 (IRVKN)
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಯೆಶಾಯ 9 : 13 (IRVKN)
ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
ಯೆಶಾಯ 9 : 14 (IRVKN)
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
ಯೆಶಾಯ 9 : 15 (IRVKN)
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
ಯೆಶಾಯ 9 : 16 (IRVKN)
ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
ಯೆಶಾಯ 9 : 17 (IRVKN)
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಯೆಶಾಯ 9 : 18 (IRVKN)
ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
ಯೆಶಾಯ 9 : 19 (IRVKN)
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
ಯೆಶಾಯ 9 : 20 (IRVKN)
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
ಯೆಶಾಯ 9 : 21 (IRVKN)
ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21