ಯಾಕೋಬನು 4 : 1 (IRVKN)
ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ [* ಅಥವಾ. ದಂಡಿಳಿದಿರುವ. ರೋಮಾ. 7:23; 1 ಪೇತ್ರ. 2:11:] ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
ಯಾಕೋಬನು 4 : 2 (IRVKN)
ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
ಯಾಕೋಬನು 4 : 3 (IRVKN)
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ [† 1 ಯೋಹಾ 5:14:] ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
ಯಾಕೋಬನು 4 : 4 (IRVKN)
[‡ ಯೆಶಾ 54:5; ಯೆರೆ 2:20:] ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ [§ ಯೋಹಾ 15:19; 1 ಯೋಹಾ 2:15. ಮತ್ತಾ 6:24:] ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ಯಾಕೋಬನು 4 : 5 (IRVKN)
[* 1 ಕೊರಿ 6:19; 2 ಕೊರಿ 6:16:] ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
ಯಾಕೋಬನು 4 : 6 (IRVKN)
[† ಯೆಶಾ 54:7, 8; ಮತ್ತಾ 13:12:] ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ [‡ ಜ್ಞಾ. 3:34; 1 ಪೇತ್ರ. 5:5; ಕೀರ್ತ 138:6; ಮತ್ತಾ 23:12; 2 ಕೊರಿ 7:6:] ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
ಯಾಕೋಬನು 4 : 7 (IRVKN)
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು [§ 1 ಪೇತ್ರ. 5:8, 9; ಎಫೆ 4:27; 6:11:] ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಯಾಕೋಬನು 4 : 8 (IRVKN)
[* 2 ಪೂರ್ವ 15:2; ಜೆಕ. 1:3; ಮಲಾ. 3:7; ಲೂಕ 15:20:] ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, [† ಯೆಶಾ 1:16:] ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, [‡ ಯೆರೆ 4:14:] ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
ಯಾಕೋಬನು 4 : 9 (IRVKN)
[§ ಮತ್ತಾ 5:4:] ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
ಯಾಕೋಬನು 4 : 10 (IRVKN)
[* ವ. 6; ಯೆಶಾ 57:15. ಮತ್ತಾ 23:12; ಲೂಕ 14:11; 18:14; 1 ಪೇತ್ರ. 5:5, 6:] ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು. [PE][PS]
ಯಾಕೋಬನು 4 : 11 (IRVKN)
ಸಹೋದರರೇ, [† 2 ಕೊರಿ 12:20; 1 ಪೇತ್ರ. 2:1; ಯಾಕೋಬ 5:9:] ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ [‡ ಮತ್ತಾ 7:1; ಲೂಕ 6:37; ರೋಮಾ. 14:13; 1 ಕೊರಿ 4:5:] ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
ಯಾಕೋಬನು 4 : 12 (IRVKN)
[§ ಯೆಶಾ 33:22; ಯಾಕೋಬ. 5:9:] ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ [* ಮತ್ತಾ 10:28:] ನಾಶಮಾಡುವುದಕ್ಕೂ ಸಮರ್ಥನು. [† ರೋಮಾ. 14:4:] ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? [PE][PS]
ಯಾಕೋಬನು 4 : 13 (IRVKN)
[‡ ಜ್ಞಾ. 27:1; ಲೂಕ 12:18-20:] “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.
ಯಾಕೋಬನು 4 : 14 (IRVKN)
ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? [§ ಕೀರ್ತ 102:3; ಯೋಬ. 7:7:] ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.
ಯಾಕೋಬನು 4 : 15 (IRVKN)
ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು [* ಅ. ಕೃ. 18:21:] “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
ಯಾಕೋಬನು 4 : 16 (IRVKN)
ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. [† 1 ಕೊರಿ 5:6:] ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.
ಯಾಕೋಬನು 4 : 17 (IRVKN)
ಹೀಗಿರುವುದರಿಂದ [‡ ಯೋಹಾ 9:41; 15:22, 24; ಲೂಕ 12:47, 48; 2 ಪೇತ್ರ. 2:21:] ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ. [PE]
❮
❯