ಯೆರೆಮಿಯ 1 : 1 (IRVKN)
ಪೀಠಿಕೆ ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
ಯೆರೆಮಿಯ 1 : 2 (IRVKN)
ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
ಯೆರೆಮಿಯ 1 : 3 (IRVKN)
ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
ಯೆರೆಮಿಯ 1 : 4 (IRVKN)
ಯೆರೆಮೀಯನ ಕರೆ ಕರ್ತನಾದ ಯೆಹೋವನು ನನಗೆ,
ಯೆರೆಮಿಯ 1 : 5 (IRVKN)
“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
ಯೆರೆಮಿಯ 1 : 6 (IRVKN)
ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
ಯೆರೆಮಿಯ 1 : 7 (IRVKN)
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
ಯೆರೆಮಿಯ 1 : 8 (IRVKN)
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
ಯೆರೆಮಿಯ 1 : 9 (IRVKN)
ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
ಯೆರೆಮಿಯ 1 : 10 (IRVKN)
ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
ಯೆರೆಮಿಯ 1 : 11 (IRVKN)
ಎರಡು ದರ್ಶನಗಳು ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
ಯೆರೆಮಿಯ 1 : 12 (IRVKN)
ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.
ಯೆರೆಮಿಯ 1 : 13 (IRVKN)
ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
ಯೆರೆಮಿಯ 1 : 14 (IRVKN)
ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
ಯೆರೆಮಿಯ 1 : 15 (IRVKN)
ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
ಯೆರೆಮಿಯ 1 : 16 (IRVKN)
ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ* ನಿರ್ಮಿಸಿದವುಗಳಿಗೆ ವಿಗ್ರಹಗಳಿಗೆ. ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
ಯೆರೆಮಿಯ 1 : 17 (IRVKN)
ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
ಯೆರೆಮಿಯ 1 : 18 (IRVKN)
ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
ಯೆರೆಮಿಯ 1 : 19 (IRVKN)
ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19