ಯೆರೆಮಿಯ 11 : 1 (IRVKN)
ಒಡಂಬಡಿಕೆಯ ಉಲ್ಲಂಘನೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
ಯೆರೆಮಿಯ 11 : 2 (IRVKN)
“ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
ಯೆರೆಮಿಯ 11 : 3 (IRVKN)
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
ಯೆರೆಮಿಯ 11 : 4 (IRVKN)
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
ಯೆರೆಮಿಯ 11 : 5 (IRVKN)
ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
ಯೆರೆಮಿಯ 11 : 6 (IRVKN)
ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
ಯೆರೆಮಿಯ 11 : 7 (IRVKN)
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
ಯೆರೆಮಿಯ 11 : 8 (IRVKN)
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’ ” ಎಂದು ಹೇಳಿದನು.
ಯೆರೆಮಿಯ 11 : 9 (IRVKN)
ಯೆಹೂದದ ದ್ರೋಹದ ನಿಮಿತ್ತ ಸಂಭವಿಸುವ ಕೇಡು ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ಯೆರೆಮಿಯ 11 : 10 (IRVKN)
ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
ಯೆರೆಮಿಯ 11 : 11 (IRVKN)
ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
ಯೆರೆಮಿಯ 11 : 12 (IRVKN)
ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
ಯೆರೆಮಿಯ 11 : 13 (IRVKN)
ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
ಯೆರೆಮಿಯ 11 : 14 (IRVKN)
ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
ಯೆರೆಮಿಯ 11 : 15 (IRVKN)
ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
ಯೆರೆಮಿಯ 11 : 16 (IRVKN)
ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
ಯೆರೆಮಿಯ 11 : 17 (IRVKN)
ಯೆರೆಮಿಯ 11 : 18 (IRVKN)
ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ. ಯೆರೆಮೀಯನಿಗೆ ವಿರುದ್ಧವಾದ ಒಳಸಂಚು ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
ಯೆರೆಮಿಯ 11 : 19 (IRVKN)
ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
ಯೆರೆಮಿಯ 11 : 20 (IRVKN)
ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
ಯೆರೆಮಿಯ 11 : 21 (IRVKN)
ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
ಯೆರೆಮಿಯ 11 : 22 (IRVKN)
ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
ಯೆರೆಮಿಯ 11 : 23 (IRVKN)
ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23