ಯೆರೆಮಿಯ 14 : 1 (IRVKN)
ಯೆಹೂದಕ್ಕೆ ಸಂಭವಿಸುವ ಕ್ಷಾಮ
ಯೆರೆಮಿಯ 14 : 2 (IRVKN)
ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ: ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
ಯೆರೆಮಿಯ 14 : 3 (IRVKN)
ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
ಯೆರೆಮಿಯ 14 : 4 (IRVKN)
ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
ಯೆರೆಮಿಯ 14 : 5 (IRVKN)
ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
ಯೆರೆಮಿಯ 14 : 6 (IRVKN)
ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
ಯೆರೆಮಿಯ 14 : 7 (IRVKN)
ಪ್ರವಾದಿಯು ಸ್ವಜನರಿಗಾಗಿ ಮಾಡಿದ ಪ್ರಾರ್ಥನೆ ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
ಯೆರೆಮಿಯ 14 : 8 (IRVKN)
ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
ಯೆರೆಮಿಯ 14 : 9 (IRVKN)
ಏಕೆ ಸ್ತಬ್ಧನಂತೆಯೂ* ಸ್ತಬ್ಧನಂತೆಯೂ ಅಥವಾ ಗಲಿಬಿಲಿಗೊಂಡವನಂತೆಯೂ , ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
ಯೆರೆಮಿಯ 14 : 10 (IRVKN)
ಯೆಹೋವನು ತನ್ನ ಜನರನ್ನೂ ಮತ್ತು ಅವರನ್ನು ವಂಚಿಸಿದ ಪ್ರವಾದಿಗಳನ್ನೂ ಗದರಿಸಿದ್ದು ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
ಯೆರೆಮಿಯ 14 : 11 (IRVKN)
ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
ಯೆರೆಮಿಯ 14 : 12 (IRVKN)
ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
ಯೆರೆಮಿಯ 14 : 13 (IRVKN)
ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.
ಯೆರೆಮಿಯ 14 : 14 (IRVKN)
ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
ಯೆರೆಮಿಯ 14 : 15 (IRVKN)
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’ ” ಎಂದು ಹೇಳುತ್ತೇನೆ.
ಯೆರೆಮಿಯ 14 : 16 (IRVKN)
ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
ಯೆರೆಮಿಯ 14 : 17 (IRVKN)
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
ಯೆರೆಮಿಯ 14 : 18 (IRVKN)
ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
ಯೆರೆಮಿಯ 14 : 19 (IRVKN)
ಪ್ರವಾದಿಯು ಸ್ವಜನರಿಗಾಗಿ ಮಾಡಿದ ಇನ್ನೊಂದು ಪ್ರಾರ್ಥನೆ ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
ಯೆರೆಮಿಯ 14 : 20 (IRVKN)
ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
ಯೆರೆಮಿಯ 14 : 21 (IRVKN)
ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
ಯೆರೆಮಿಯ 14 : 22 (IRVKN)
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

1 2 3 4 5 6 7 8 9 10 11 12 13 14 15 16 17 18 19 20 21 22