ಯೆರೆಮಿಯ 18 : 1 (IRVKN)
ಕುಂಬಾರ ಮತ್ತು ಜೇಡಿಮಣ್ಣು ಯೆಹೋವನು ಯೆರೆಮೀಯನಿಗೆ,
ಯೆರೆಮಿಯ 18 : 2 (IRVKN)
“ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.
ಯೆರೆಮಿಯ 18 : 3 (IRVKN)
ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.
ಯೆರೆಮಿಯ 18 : 4 (IRVKN)
ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.
ಯೆರೆಮಿಯ 18 : 5 (IRVKN)
ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,
ಯೆರೆಮಿಯ 18 : 6 (IRVKN)
“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
ಯೆರೆಮಿಯ 18 : 7 (IRVKN)
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
ಯೆರೆಮಿಯ 18 : 8 (IRVKN)
ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
ಯೆರೆಮಿಯ 18 : 9 (IRVKN)
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,
ಯೆರೆಮಿಯ 18 : 10 (IRVKN)
ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
ಯೆರೆಮಿಯ 18 : 11 (IRVKN)
ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
ಯೆರೆಮಿಯ 18 : 12 (IRVKN)
ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
ಯೆರೆಮಿಯ 18 : 13 (IRVKN)
ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.
ಯೆರೆಮಿಯ 18 : 14 (IRVKN)
ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?
ಯೆರೆಮಿಯ 18 : 15 (IRVKN)
ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
ಯೆರೆಮಿಯ 18 : 16 (IRVKN)
ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.
ಯೆರೆಮಿಯ 18 : 17 (IRVKN)
ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
ಯೆರೆಮಿಯ 18 : 18 (IRVKN)
ಜನರ ಒಳಸಂಚು ಪ್ರವಾದಿಯ ಪ್ರಾರ್ಥನೆ ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
ಯೆರೆಮಿಯ 18 : 19 (IRVKN)
ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.
ಯೆರೆಮಿಯ 18 : 20 (IRVKN)
ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
ಯೆರೆಮಿಯ 18 : 21 (IRVKN)
ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
ಯೆರೆಮಿಯ 18 : 22 (IRVKN)
ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
ಯೆರೆಮಿಯ 18 : 23 (IRVKN)
ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23