ಯೆರೆಮಿಯ 20 : 1 (IRVKN)
{ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು} [PS] ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
ಯೆರೆಮಿಯ 20 : 2 (IRVKN)
ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
ಯೆರೆಮಿಯ 20 : 3 (IRVKN)
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ [* ಪಷ್ಹೂರ್ ಅಂದರೆ ಬಿಡುಗಡೆ.] ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ [† ಮಾಗೋರ್ ಮಿಸ್ಸಾಬೀಬ್ ಅಂದರೆ ಎಲ್ಲೆಡೆ ಭಯ.] ಎಂದು ಹೇಳಿದ್ದಾನೆ.
ಯೆರೆಮಿಯ 20 : 4 (IRVKN)
ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
ಯೆರೆಮಿಯ 20 : 5 (IRVKN)
ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.
ಯೆರೆಮಿಯ 20 : 6 (IRVKN)
ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.
ಯೆರೆಮಿಯ 20 : 7 (IRVKN)
{ಪ್ರವಾದಿಯ ಪ್ರಲಾಪ} [PS] ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; [QBR] ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ. [QBR]
ಯೆರೆಮಿಯ 20 : 8 (IRVKN)
ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. [QBR] ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ. [QBR]
ಯೆರೆಮಿಯ 20 : 9 (IRVKN)
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, [QBR] ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, [QBR] ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ. [QBR]
ಯೆರೆಮಿಯ 20 : 10 (IRVKN)
“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. [QBR] ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, [QBR] “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ. [QBR]
ಯೆರೆಮಿಯ 20 : 11 (IRVKN)
ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. [QBR] ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು. [QBR]
ಯೆರೆಮಿಯ 20 : 12 (IRVKN)
ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, [QBR] ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ. [QBR]
ಯೆರೆಮಿಯ 20 : 13 (IRVKN)
ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ. [QBR]
ಯೆರೆಮಿಯ 20 : 14 (IRVKN)
ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ! [QBR]
ಯೆರೆಮಿಯ 20 : 15 (IRVKN)
“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ! [QBR]
ಯೆರೆಮಿಯ 20 : 16 (IRVKN)
ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. [QBR] ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ! [QBR]
ಯೆರೆಮಿಯ 20 : 17 (IRVKN)
ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು. [QBR]
ಯೆರೆಮಿಯ 20 : 18 (IRVKN)
ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು? [PE]

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: