ಯೆರೆಮಿಯ 22 : 1 (IRVKN)
{ಯೆಹೂದದ ಅರಸರ ವಿಷಯವಾದ ದೈವೋಕ್ತಿಗಳು} [PS] ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,
ಯೆರೆಮಿಯ 22 : 2 (IRVKN)
ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
ಯೆರೆಮಿಯ 22 : 3 (IRVKN)
ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ. [PE][PS]
ಯೆರೆಮಿಯ 22 : 4 (IRVKN)
“ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
ಯೆರೆಮಿಯ 22 : 5 (IRVKN)
ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.
ಯೆರೆಮಿಯ 22 : 6 (IRVKN)
ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, [QBR] “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, [QBR] ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ. [QBR]
ಯೆರೆಮಿಯ 22 : 7 (IRVKN)
ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. [QBR]
ಯೆರೆಮಿಯ 22 : 8 (IRVKN)
ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, [QBR]
ಯೆರೆಮಿಯ 22 : 9 (IRVKN)
‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”
ಯೆರೆಮಿಯ 22 : 10 (IRVKN)
{ಅರಸನಾದ ಶಲ್ಲೂಮನು} [PS] ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; [QBR] ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು. [QBR]
ಯೆರೆಮಿಯ 22 : 11 (IRVKN)
ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು. [QBR]
ಯೆರೆಮಿಯ 22 : 12 (IRVKN)
ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ.
ಯೆರೆಮಿಯ 22 : 13 (IRVKN)
{ಅರಸನಾದ ಯೆಹೊಯಾಕೀಮನು} [PS] ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! [QBR] ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ, [QBR]
ಯೆರೆಮಿಯ 22 : 14 (IRVKN)
ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, [QBR] ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ! [QBR]
ಯೆರೆಮಿಯ 22 : 15 (IRVKN)
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? [QBR] ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು. [QBR]
ಯೆರೆಮಿಯ 22 : 16 (IRVKN)
ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ. [QBR]
ಯೆರೆಮಿಯ 22 : 17 (IRVKN)
ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ. [QBR]
ಯೆರೆಮಿಯ 22 : 18 (IRVKN)
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. [QBR] “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು. [QBR]
ಯೆರೆಮಿಯ 22 : 19 (IRVKN)
ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ. [QBR]
ಯೆರೆಮಿಯ 22 : 20 (IRVKN)
ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! [QBR] ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ. [QBR]
ಯೆರೆಮಿಯ 22 : 21 (IRVKN)
ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. [QBR]
ಯೆರೆಮಿಯ 22 : 22 (IRVKN)
ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. [QBR] ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ. [QBR]
ಯೆರೆಮಿಯ 22 : 23 (IRVKN)
ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! [PE][PS]
ಯೆರೆಮಿಯ 22 : 24 (IRVKN)
ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
ಯೆರೆಮಿಯ 22 : 25 (IRVKN)
ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
ಯೆರೆಮಿಯ 22 : 26 (IRVKN)
ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.
ಯೆರೆಮಿಯ 22 : 27 (IRVKN)
ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ. [QBR]
ಯೆರೆಮಿಯ 22 : 28 (IRVKN)
ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, [QBR] ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? [QBR] ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ? [QBR]
ಯೆರೆಮಿಯ 22 : 29 (IRVKN)
ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು! [QBR]
ಯೆರೆಮಿಯ 22 : 30 (IRVKN)
ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; [QBR] ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು” ಎಂದು ಹೇಳುತ್ತಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: