ಯೆರೆಮಿಯ 23 : 1 (IRVKN)
{ಧರ್ಮರಾಜನು ಪಟ್ಟಕ್ಕೆ ಬರುವ ವಾಗ್ದಾನ} [PS] “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ. [PE][PS]
ಯೆರೆಮಿಯ 23 : 2 (IRVKN)
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
ಯೆರೆಮಿಯ 23 : 3 (IRVKN)
ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
ಯೆರೆಮಿಯ 23 : 4 (IRVKN)
ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ. [QBR]
ಯೆರೆಮಿಯ 23 : 5 (IRVKN)
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. [QBR] ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. [QBR]
ಯೆರೆಮಿಯ 23 : 6 (IRVKN)
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; [QBR] ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. [PE][PS]
ಯೆರೆಮಿಯ 23 : 7 (IRVKN)
ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
ಯೆರೆಮಿಯ 23 : 8 (IRVKN)
ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
ಯೆರೆಮಿಯ 23 : 9 (IRVKN)
{ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು} [PS] ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. [QBR] ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. [QBR] ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ. [QBR]
ಯೆರೆಮಿಯ 23 : 10 (IRVKN)
ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. [QBR] ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ. [QBR]
ಯೆರೆಮಿಯ 23 : 11 (IRVKN)
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. [QBR] ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. [QBR]
ಯೆರೆಮಿಯ 23 : 12 (IRVKN)
ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. [QBR] ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ. [QBR]
ಯೆರೆಮಿಯ 23 : 13 (IRVKN)
ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; [QBR] ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ. [QBR]
ಯೆರೆಮಿಯ 23 : 14 (IRVKN)
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. [QBR] ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. [QBR] ಅವರೆಲ್ಲರು ಸೊದೋಮಿನಂತೆ, [* ಸೊದೋಮಿನಂತೆ, ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ 18:20; 19:24-25 ನೋಡಿರಿ). ] ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. [QBR]
ಯೆರೆಮಿಯ 23 : 15 (IRVKN)
ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; [QBR] ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
ಯೆರೆಮಿಯ 23 : 16 (IRVKN)
{ಯೆಹೋವನು ಕೊಡುವ ಎಚ್ಚರಿಕೆ} [PS] ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. [QBR] ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. [QBR]
ಯೆರೆಮಿಯ 23 : 17 (IRVKN)
ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. [QBR] ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ. [QBR]
ಯೆರೆಮಿಯ 23 : 18 (IRVKN)
ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? [QBR] ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? [QBR]
ಯೆರೆಮಿಯ 23 : 19 (IRVKN)
ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. [QBR] ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. [QBR]
ಯೆರೆಮಿಯ 23 : 20 (IRVKN)
ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. [QBR] ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ. [QBR]
ಯೆರೆಮಿಯ 23 : 21 (IRVKN)
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; [QBR] ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು. [QBR]
ಯೆರೆಮಿಯ 23 : 22 (IRVKN)
ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, [QBR] ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ. [QBR]
ಯೆರೆಮಿಯ 23 : 23 (IRVKN)
ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ? [QBR]
ಯೆರೆಮಿಯ 23 : 24 (IRVKN)
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? [QBR] ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.” [PE][PS]
ಯೆರೆಮಿಯ 23 : 25 (IRVKN)
ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ಯೆರೆಮಿಯ 23 : 26 (IRVKN)
ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
ಯೆರೆಮಿಯ 23 : 27 (IRVKN)
ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
ಯೆರೆಮಿಯ 23 : 28 (IRVKN)
ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
ಯೆರೆಮಿಯ 23 : 29 (IRVKN)
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ. [PS]
ಯೆರೆಮಿಯ 23 : 30 (IRVKN)
{ಯೆಹೋವನ ಭಾರ ಎಂದು ನುಡಿಯುವ ಜನರಿಗೆ ಆಗುವ ಶಿಕ್ಷೆ} [PS] ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
ಯೆರೆಮಿಯ 23 : 31 (IRVKN)
ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
ಯೆರೆಮಿಯ 23 : 32 (IRVKN)
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ. [PE][PS]
ಯೆರೆಮಿಯ 23 : 33 (IRVKN)
ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
ಯೆರೆಮಿಯ 23 : 34 (IRVKN)
ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
ಯೆರೆಮಿಯ 23 : 35 (IRVKN)
ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’
ಯೆರೆಮಿಯ 23 : 36 (IRVKN)
ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
ಯೆರೆಮಿಯ 23 : 37 (IRVKN)
ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.
ಯೆರೆಮಿಯ 23 : 38 (IRVKN)
ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
ಯೆರೆಮಿಯ 23 : 39 (IRVKN)
ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
ಯೆರೆಮಿಯ 23 : 40 (IRVKN)
ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’ ” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: