ಯೆರೆಮಿಯ 25 : 1 (IRVKN)
{ಯೆಹೂದ್ಯರ ದ್ರೋಹ} [PS] ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
ಯೆರೆಮಿಯ 25 : 2 (IRVKN)
ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. [PE][PS]
ಯೆರೆಮಿಯ 25 : 3 (IRVKN)
ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
ಯೆರೆಮಿಯ 25 : 4 (IRVKN)
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
ಯೆರೆಮಿಯ 25 : 5 (IRVKN)
ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
ಯೆರೆಮಿಯ 25 : 6 (IRVKN)
ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
ಯೆರೆಮಿಯ 25 : 7 (IRVKN)
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. [PS]
ಯೆರೆಮಿಯ 25 : 8 (IRVKN)
{ಎಪ್ಪತ್ತು ವರ್ಷಗಳ ಸೆರೆ} [PS] ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
ಯೆರೆಮಿಯ 25 : 9 (IRVKN)
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
ಯೆರೆಮಿಯ 25 : 10 (IRVKN)
ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
ಯೆರೆಮಿಯ 25 : 11 (IRVKN)
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
ಯೆರೆಮಿಯ 25 : 12 (IRVKN)
ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
ಯೆರೆಮಿಯ 25 : 13 (IRVKN)
ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
ಯೆರೆಮಿಯ 25 : 14 (IRVKN)
ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ. [PS]
ಯೆರೆಮಿಯ 25 : 15 (IRVKN)
{ಯೆಹೋವನು ವಿಧಿಸುವ ದುರ್ಗತಿ} [PS] ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
ಯೆರೆಮಿಯ 25 : 16 (IRVKN)
ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
ಯೆರೆಮಿಯ 25 : 17 (IRVKN)
ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
ಯೆರೆಮಿಯ 25 : 18 (IRVKN)
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
ಯೆರೆಮಿಯ 25 : 19 (IRVKN)
ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
ಯೆರೆಮಿಯ 25 : 20 (IRVKN)
ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
ಯೆರೆಮಿಯ 25 : 21 (IRVKN)
ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
ಯೆರೆಮಿಯ 25 : 22 (IRVKN)
ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
ಯೆರೆಮಿಯ 25 : 23 (IRVKN)
ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
ಯೆರೆಮಿಯ 25 : 24 (IRVKN)
ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
ಯೆರೆಮಿಯ 25 : 25 (IRVKN)
ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
ಯೆರೆಮಿಯ 25 : 26 (IRVKN)
ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ [* ಶೇಷಕಿನ ಬಾಬೆಲಿನ ರಹಸ್ಯವಾದ ಹೆಸರು.] ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
ಯೆರೆಮಿಯ 25 : 27 (IRVKN)
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
ಯೆರೆಮಿಯ 25 : 28 (IRVKN)
ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
ಯೆರೆಮಿಯ 25 : 29 (IRVKN)
ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
ಯೆರೆಮಿಯ 25 : 30 (IRVKN)
ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, [QBR] “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. [QBR] ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. [QBR] ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು. [QBR]
ಯೆರೆಮಿಯ 25 : 31 (IRVKN)
ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, [QBR] ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, [QBR] ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
ಯೆರೆಮಿಯ 25 : 32 (IRVKN)
{ಜನಾಂಗಕ್ಕೆ ಬರುವ ಕೇಡು} [PS] ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು. [QBR]
ಯೆರೆಮಿಯ 25 : 33 (IRVKN)
ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; [QBR] ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
ಯೆರೆಮಿಯ 25 : 34 (IRVKN)
{ಯೆಹೂದ್ಯ ನಾಯಕರಿಗಾಗುವ ಶಿಕ್ಷೆ} [PS] ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! [QBR] ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; [QBR] ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. [QBR]
ಯೆರೆಮಿಯ 25 : 35 (IRVKN)
ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು. [QBR]
ಯೆರೆಮಿಯ 25 : 36 (IRVKN)
ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! [QBR] ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ. [QBR]
ಯೆರೆಮಿಯ 25 : 37 (IRVKN)
ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ. [QBR]
ಯೆರೆಮಿಯ 25 : 38 (IRVKN)
ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. [QBR] ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: