ಯೆರೆಮಿಯ 26 : 1 (IRVKN)
{ಯೆರೆಮೀಯನು ಮರಣದಿಂದ ಪಾರಾದ್ದದು} [PS] ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
ಯೆರೆಮಿಯ 26 : 2 (IRVKN)
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
ಯೆರೆಮಿಯ 26 : 3 (IRVKN)
ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
ಯೆರೆಮಿಯ 26 : 4 (IRVKN)
ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
ಯೆರೆಮಿಯ 26 : 5 (IRVKN)
ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
ಯೆರೆಮಿಯ 26 : 6 (IRVKN)
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’ ” ಎಂದು ಹೇಳು ಎಂದನು.
ಯೆರೆಮಿಯ 26 : 7 (IRVKN)
ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
ಯೆರೆಮಿಯ 26 : 8 (IRVKN)
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
ಯೆರೆಮಿಯ 26 : 9 (IRVKN)
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು. [PE][PS]
ಯೆರೆಮಿಯ 26 : 10 (IRVKN)
ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
ಯೆರೆಮಿಯ 26 : 11 (IRVKN)
ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
ಯೆರೆಮಿಯ 26 : 12 (IRVKN)
ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
ಯೆರೆಮಿಯ 26 : 13 (IRVKN)
ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
ಯೆರೆಮಿಯ 26 : 14 (IRVKN)
ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
ಯೆರೆಮಿಯ 26 : 15 (IRVKN)
ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
ಯೆರೆಮಿಯ 26 : 16 (IRVKN)
ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
ಯೆರೆಮಿಯ 26 : 17 (IRVKN)
ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
ಯೆರೆಮಿಯ 26 : 18 (IRVKN)
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
ಯೆರೆಮಿಯ 26 : 19 (IRVKN)
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು. [PE][PS]
ಯೆರೆಮಿಯ 26 : 20 (IRVKN)
ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
ಯೆರೆಮಿಯ 26 : 21 (IRVKN)
ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
ಯೆರೆಮಿಯ 26 : 22 (IRVKN)
ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಯೆರೆಮಿಯ 26 : 23 (IRVKN)
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. [PE][PS]
ಯೆರೆಮಿಯ 26 : 24 (IRVKN)
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: