ಯೆರೆಮಿಯ 3 : 1 (IRVKN)
{ಇಸ್ರಾಯೇಲಿನ ವಿಶ್ವಾಸಘಾತ} [PS] ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? [QBR] ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ? [QBR]
ಯೆರೆಮಿಯ 3 : 2 (IRVKN)
ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? [QBR] ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; [QBR] ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ. [QBR]
ಯೆರೆಮಿಯ 3 : 3 (IRVKN)
ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ. [QBR]
ಯೆರೆಮಿಯ 3 : 4 (IRVKN)
ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ. [QBR]
ಯೆರೆಮಿಯ 3 : 5 (IRVKN)
‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ. [PS]
ಯೆರೆಮಿಯ 3 : 6 (IRVKN)
{ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು} [PS] ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
ಯೆರೆಮಿಯ 3 : 7 (IRVKN)
ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
ಯೆರೆಮಿಯ 3 : 8 (IRVKN)
ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.
ಯೆರೆಮಿಯ 3 : 9 (IRVKN)
ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.
ಯೆರೆಮಿಯ 3 : 10 (IRVKN)
ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ. [PE][PS]
ಯೆರೆಮಿಯ 3 : 11 (IRVKN)
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
ಯೆರೆಮಿಯ 3 : 12 (IRVKN)
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ಯೆರೆಮಿಯ 3 : 13 (IRVKN)
ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ. [QBR]
ಯೆರೆಮಿಯ 3 : 14 (IRVKN)
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು. [QBR]
ಯೆರೆಮಿಯ 3 : 15 (IRVKN)
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು. [QBR]
ಯೆರೆಮಿಯ 3 : 16 (IRVKN)
ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ. [PE][PS]
ಯೆರೆಮಿಯ 3 : 17 (IRVKN)
ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು. [PE][PS]
ಯೆರೆಮಿಯ 3 : 18 (IRVKN)
ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು [* ಉತ್ತರ ಸೀಮೆಯನ್ನು ಇಲ್ಲಿ ಉತ್ತರದ ಸೀಮೆಯು ಅಶ್ಶೂರ್ಯ ಮತ್ತು ಬಾಬೆಲ್ ಅನ್ನು ಒಳಗೊಂಡಿದೆ. ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸಿಗಳಾಗಿ ಈ ಸೀಮೆಗಳಿಗೆ ತೆಗೆದುಕೊಂಡು ಹೋಗಲಾಯಿತು.] ಬಿಟ್ಟು ಬರುವವು.
ಯೆರೆಮಿಯ 3 : 19 (IRVKN)
{ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು} [PS] “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು. [QBR]
ಯೆರೆಮಿಯ 3 : 20 (IRVKN)
ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ. [PE][PS]
ಯೆರೆಮಿಯ 3 : 21 (IRVKN)
ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ. [QBR]
ಯೆರೆಮಿಯ 3 : 22 (IRVKN)
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. [QBR] ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು. [QBR]
ಯೆರೆಮಿಯ 3 : 23 (IRVKN)
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ. [QBR]
ಯೆರೆಮಿಯ 3 : 24 (IRVKN)
ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ [QBR] ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ. [QBR]
ಯೆರೆಮಿಯ 3 : 25 (IRVKN)
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. [QBR] ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: