ಯೆರೆಮಿಯ 30 : 1 (IRVKN)
{ಸುಸ್ಥಿತಿಗೆ ತರುವ ವಾಗ್ದಾನ} [PS] ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
ಯೆರೆಮಿಯ 30 : 2 (IRVKN)
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
ಯೆರೆಮಿಯ 30 : 3 (IRVKN)
ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. [PS]
ಯೆರೆಮಿಯ 30 : 4 (IRVKN)
{ಇಸ್ರಾಯೇಲಿಗೆ ಸಂಭವಿಸುವ ಬಾಧೆಯೂ ಉದ್ಧಾರವೂ} [PS] ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
ಯೆರೆಮಿಯ 30 : 5 (IRVKN)
“ಯೆಹೋವನು ಇಂತೆನ್ನುತ್ತಾನೆ, [QBR] ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ; [QBR]
ಯೆರೆಮಿಯ 30 : 6 (IRVKN)
ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? [QBR] ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? [QBR]
ಯೆರೆಮಿಯ 30 : 7 (IRVKN)
ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, [QBR] ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.” [PE][PS]
ಯೆರೆಮಿಯ 30 : 8 (IRVKN)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
ಯೆರೆಮಿಯ 30 : 9 (IRVKN)
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.” [QBR]
ಯೆರೆಮಿಯ 30 : 10 (IRVKN)
ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! [QBR] ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. [QBR] ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.” [QBR]
ಯೆರೆಮಿಯ 30 : 11 (IRVKN)
ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; [QBR] ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. [QBR] ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
ಯೆರೆಮಿಯ 30 : 12 (IRVKN)
{ಹಾಳಾಗಿ ಹೋದ ಚೀಯೋನನ್ನು ಯೆಹೋವನು ಉನ್ನತಿಗೆ ತರುವುದು} [PS] ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ. [QBR]
ಯೆರೆಮಿಯ 30 : 13 (IRVKN)
ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. [QBR]
ಯೆರೆಮಿಯ 30 : 14 (IRVKN)
ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. [QBR] ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು. [QBR]
ಯೆರೆಮಿಯ 30 : 15 (IRVKN)
ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? [QBR] ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು. [QBR]
ಯೆರೆಮಿಯ 30 : 16 (IRVKN)
ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. [QBR] ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.” [QBR]
ಯೆರೆಮಿಯ 30 : 17 (IRVKN)
ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, [QBR] ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.” [QBR]
ಯೆರೆಮಿಯ 30 : 18 (IRVKN)
ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. [QBR] ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು. [QBR]
ಯೆರೆಮಿಯ 30 : 19 (IRVKN)
ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. [QBR] ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು. [QBR]
ಯೆರೆಮಿಯ 30 : 20 (IRVKN)
ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, [QBR] ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು. [QBR]
ಯೆರೆಮಿಯ 30 : 21 (IRVKN)
ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. [QBR] ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. [QBR] ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.” [QBR]
ಯೆರೆಮಿಯ 30 : 22 (IRVKN)
ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
ಯೆರೆಮಿಯ 30 : 23 (IRVKN)
{ಯೆಹೋವನ ರೋಷವೆಂಬ ಬಿರುಗಾಳಿ} [PS] ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; [QBR] ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. [QBR]
ಯೆರೆಮಿಯ 30 : 24 (IRVKN)
ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, [QBR] ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: