ಯೆರೆಮಿಯ 31 : 1 (IRVKN)
{ಇಸ್ರಾಯೇಲ್ ಸೆರೆಯಿಂದ ಹಾಯಾಗಿ ಹಿಂದಿರುಗುವುದು} [PS] ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ. [QBR]
ಯೆರೆಮಿಯ 31 : 2 (IRVKN)
ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; [QBR] ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು, [QBR]
ಯೆರೆಮಿಯ 31 : 3 (IRVKN)
‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ, [QBR]
ಯೆರೆಮಿಯ 31 : 4 (IRVKN)
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. [QBR] ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ. [QBR]
ಯೆರೆಮಿಯ 31 : 5 (IRVKN)
ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು. [QBR]
ಯೆರೆಮಿಯ 31 : 6 (IRVKN)
ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು. [QBR]
ಯೆರೆಮಿಯ 31 : 7 (IRVKN)
ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. [QBR] ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. [QBR]
ಯೆರೆಮಿಯ 31 : 8 (IRVKN)
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. [QBR] ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು. [QBR]
ಯೆರೆಮಿಯ 31 : 9 (IRVKN)
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. [QBR] ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. [QBR] ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ. [QBR]
ಯೆರೆಮಿಯ 31 : 10 (IRVKN)
ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, [QBR] ದೂರ ದ್ವೀಪಗಳಲ್ಲಿ ಸಾರಿರಿ! [QBR] ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. [QBR] ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, [QBR]
ಯೆರೆಮಿಯ 31 : 11 (IRVKN)
ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ. [QBR]
ಯೆರೆಮಿಯ 31 : 12 (IRVKN)
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. [QBR] ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. [QBR] ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು. [QBR]
ಯೆರೆಮಿಯ 31 : 13 (IRVKN)
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; [QBR] ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. [QBR] ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, [QBR] ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು. [QBR]
ಯೆರೆಮಿಯ 31 : 14 (IRVKN)
ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; [QBR] ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.” ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ [QBR]
ಯೆರೆಮಿಯ 31 : 15 (IRVKN)
ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, [QBR] ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.” [QBR]
ಯೆರೆಮಿಯ 31 : 16 (IRVKN)
ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. [QBR] ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ. [QBR]
ಯೆರೆಮಿಯ 31 : 17 (IRVKN)
ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು. [QBR]
ಯೆರೆಮಿಯ 31 : 18 (IRVKN)
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. [QBR] ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ. [QBR]
ಯೆರೆಮಿಯ 31 : 19 (IRVKN)
ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು [* ತೊಡೆಯನ್ನು ಬಡಿದುಕೊಂಡೆನು ಎದೆಯನ್ನು ಬಡಿದುಕೊಂಡೆನು] . [QBR] ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’ ” [QBR]
ಯೆರೆಮಿಯ 31 : 20 (IRVKN)
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? [QBR] ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು. [QBR]
ಯೆರೆಮಿಯ 31 : 21 (IRVKN)
ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; [QBR] ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. [QBR] ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. [QBR]
ಯೆರೆಮಿಯ 31 : 22 (IRVKN)
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? [QBR] ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.” [PS]
ಯೆರೆಮಿಯ 31 : 23 (IRVKN)
{ಯೆಹೂದದ ಮತ್ತು ಇಸ್ರಾಯೇಲಿನ ಮುಂದಿನ ಸಂತತಿ} [PS] ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
ಯೆರೆಮಿಯ 31 : 24 (IRVKN)
ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.
ಯೆರೆಮಿಯ 31 : 25 (IRVKN)
ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.
ಯೆರೆಮಿಯ 31 : 26 (IRVKN)
ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು. [PE][PS]
ಯೆರೆಮಿಯ 31 : 27 (IRVKN)
ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.
ಯೆರೆಮಿಯ 31 : 28 (IRVKN)
ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.
ಯೆರೆಮಿಯ 31 : 29 (IRVKN)
‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.
ಯೆರೆಮಿಯ 31 : 30 (IRVKN)
ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು” ಎಂದು ಹೇಳುತ್ತಾನೆ. [PS]
ಯೆರೆಮಿಯ 31 : 31 (IRVKN)
{ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ} [PS] ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
ಯೆರೆಮಿಯ 31 : 32 (IRVKN)
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
ಯೆರೆಮಿಯ 31 : 33 (IRVKN)
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
ಯೆರೆಮಿಯ 31 : 34 (IRVKN)
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
ಯೆರೆಮಿಯ 31 : 35 (IRVKN)
{ಯೆಹೋವನು ಇಸ್ರಾಯೇಲನ್ನು ಎಂದಿಗೂ ತ್ಯಜಿಸನು} [PS] ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, [QBR] ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, [QBR] ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ, [QBR]
ಯೆರೆಮಿಯ 31 : 36 (IRVKN)
“ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, [QBR] ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.” [QBR]
ಯೆರೆಮಿಯ 31 : 37 (IRVKN)
ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, [QBR] ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, [QBR] ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ. [PS]
ಯೆರೆಮಿಯ 31 : 38 (IRVKN)
{ಯೆರೂಸಲೇಮಿಗೆ ಆಗುವ ಅಭಿವೃದ್ಧಿ} [PS] ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.
ಯೆರೆಮಿಯ 31 : 39 (IRVKN)
ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.
ಯೆರೆಮಿಯ 31 : 40 (IRVKN)
ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: