ಯೆರೆಮಿಯ 46 : 1 (IRVKN)
{ಐಗುಪ್ತದ ವಿಷಯವಾದ ದೈವೋಕ್ತಿ} [PS] ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
ಯೆರೆಮಿಯ 46 : 2 (IRVKN)
ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ: [QBR]
ಯೆರೆಮಿಯ 46 : 3 (IRVKN)
“ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ! [QBR]
ಯೆರೆಮಿಯ 46 : 4 (IRVKN)
ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ. [QBR]
ಯೆರೆಮಿಯ 46 : 5 (IRVKN)
ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. [QBR] ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ. [QBR]
ಯೆರೆಮಿಯ 46 : 6 (IRVKN)
ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. [QBR] ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ. [QBR]
ಯೆರೆಮಿಯ 46 : 7 (IRVKN)
ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? [QBR] ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು? [QBR]
ಯೆರೆಮಿಯ 46 : 8 (IRVKN)
ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; [QBR] ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ. [QBR]
ಯೆರೆಮಿಯ 46 : 9 (IRVKN)
ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! [QBR] ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ! [QBR]
ಯೆರೆಮಿಯ 46 : 10 (IRVKN)
ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; [QBR] ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. [QBR] ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ. [QBR]
ಯೆರೆಮಿಯ 46 : 11 (IRVKN)
ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; [QBR] ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು. [QBR]
ಯೆರೆಮಿಯ 46 : 12 (IRVKN)
ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; [QBR] ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ. [QBR]
ಯೆರೆಮಿಯ 46 : 13 (IRVKN)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ [QBR] ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು. [QBR]
ಯೆರೆಮಿಯ 46 : 14 (IRVKN)
“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, [QBR] ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ. [QBR]
ಯೆರೆಮಿಯ 46 : 15 (IRVKN)
ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು. [QBR]
ಯೆರೆಮಿಯ 46 : 16 (IRVKN)
ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; [QBR] ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು. [QBR]
ಯೆರೆಮಿಯ 46 : 17 (IRVKN)
ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು. [QBR]
ಯೆರೆಮಿಯ 46 : 18 (IRVKN)
ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, [QBR] “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, [QBR] ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು. [QBR]
ಯೆರೆಮಿಯ 46 : 19 (IRVKN)
ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
ಯೆರೆಮಿಯ 46 : 20 (IRVKN)
ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.
ಯೆರೆಮಿಯ 46 : 21 (IRVKN)
ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
ಯೆರೆಮಿಯ 46 : 22 (IRVKN)
ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
ಯೆರೆಮಿಯ 46 : 23 (IRVKN)
ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
ಯೆರೆಮಿಯ 46 : 24 (IRVKN)
ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ.
ಯೆರೆಮಿಯ 46 : 25 (IRVKN)
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
ಯೆರೆಮಿಯ 46 : 26 (IRVKN)
ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
ಯೆರೆಮಿಯ 46 : 27 (IRVKN)
ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
ಯೆರೆಮಿಯ 46 : 28 (IRVKN)
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: