ಯೆರೆಮಿಯ 47 : 1 (IRVKN)
{ಫಿಲಿಷ್ಟಿಯದ ವಿಷಯವಾದ ದೈವೋಕ್ತಿ} [PS] ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. [PE][PS]
ಯೆರೆಮಿಯ 47 : 2 (IRVKN)
ಯೆಹೋವನು ಇಂತೆನ್ನುತ್ತಾನೆ, [QBR] “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, [QBR] ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. [QBR] ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. [QBR]
ಯೆರೆಮಿಯ 47 : 3 (IRVKN)
ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, [QBR] ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು. [QBR]
ಯೆರೆಮಿಯ 47 : 4 (IRVKN)
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; [QBR] ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು. [PE][PS]
ಯೆರೆಮಿಯ 47 : 5 (IRVKN)
“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
ಯೆರೆಮಿಯ 47 : 6 (IRVKN)
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
ಯೆರೆಮಿಯ 47 : 7 (IRVKN)
ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.” [PE]

1 2 3 4 5 6 7

BG:

Opacity:

Color:


Size:


Font: