ಯೆರೆಮಿಯ 48 : 1 (IRVKN)
ಮೋವಾಬಿನ ವಿಷಯವಾದ ದೈವೋಕ್ತಿ ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
ಯೆರೆಮಿಯ 48 : 2 (IRVKN)
ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
ಯೆರೆಮಿಯ 48 : 3 (IRVKN)
‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!
ಯೆರೆಮಿಯ 48 : 4 (IRVKN)
ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.
ಯೆರೆಮಿಯ 48 : 5 (IRVKN)
ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
ಯೆರೆಮಿಯ 48 : 6 (IRVKN)
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.
ಯೆರೆಮಿಯ 48 : 7 (IRVKN)
ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ಯೆರೆಮಿಯ 48 : 8 (IRVKN)
ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
ಯೆರೆಮಿಯ 48 : 9 (IRVKN)
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
ಯೆರೆಮಿಯ 48 : 10 (IRVKN)
ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
ಯೆರೆಮಿಯ 48 : 11 (IRVKN)
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
ಯೆರೆಮಿಯ 48 : 12 (IRVKN)
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.
ಯೆರೆಮಿಯ 48 : 13 (IRVKN)
ಯೆರೆಮಿಯ 48 : 14 (IRVKN)
ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು. “ ‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?
ಯೆರೆಮಿಯ 48 : 15 (IRVKN)
ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
ಯೆರೆಮಿಯ 48 : 16 (IRVKN)
ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.
ಯೆರೆಮಿಯ 48 : 17 (IRVKN)
ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.
ಯೆರೆಮಿಯ 48 : 18 (IRVKN)
ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
ಯೆರೆಮಿಯ 48 : 19 (IRVKN)
ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.
ಯೆರೆಮಿಯ 48 : 20 (IRVKN)
ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
ಯೆರೆಮಿಯ 48 : 21 (IRVKN)
ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,
ಯೆರೆಮಿಯ 48 : 22 (IRVKN)
ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
ಯೆರೆಮಿಯ 48 : 23 (IRVKN)
ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,
ಯೆರೆಮಿಯ 48 : 24 (IRVKN)
ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.
ಯೆರೆಮಿಯ 48 : 25 (IRVKN)
ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.
ಯೆರೆಮಿಯ 48 : 26 (IRVKN)
“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
ಯೆರೆಮಿಯ 48 : 27 (IRVKN)
ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
ಯೆರೆಮಿಯ 48 : 28 (IRVKN)
ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
ಯೆರೆಮಿಯ 48 : 29 (IRVKN)
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”
ಯೆರೆಮಿಯ 48 : 30 (IRVKN)
ಯೆರೆಮಿಯ 48 : 31 (IRVKN)
ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ. ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
ಯೆರೆಮಿಯ 48 : 32 (IRVKN)
ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
ಯೆರೆಮಿಯ 48 : 33 (IRVKN)
ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
ಯೆರೆಮಿಯ 48 : 34 (IRVKN)
ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
ಯೆರೆಮಿಯ 48 : 35 (IRVKN)
ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
ಯೆರೆಮಿಯ 48 : 36 (IRVKN)
ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
ಯೆರೆಮಿಯ 48 : 37 (IRVKN)
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
ಯೆರೆಮಿಯ 48 : 38 (IRVKN)
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
ಯೆರೆಮಿಯ 48 : 39 (IRVKN)
ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
ಯೆರೆಮಿಯ 48 : 40 (IRVKN)
ಯೆರೆಮಿಯ 48 : 41 (IRVKN)
ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
ಯೆರೆಮಿಯ 48 : 42 (IRVKN)
ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”
ಯೆರೆಮಿಯ 48 : 43 (IRVKN)
ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
ಯೆರೆಮಿಯ 48 : 44 (IRVKN)
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
ಯೆರೆಮಿಯ 48 : 45 (IRVKN)
ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
ಯೆರೆಮಿಯ 48 : 46 (IRVKN)
“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ* ಕೆಮೋಷಿನ ಕೆಮೋಷ್ ಮೋವಾಬ್ಯರ ದೇವರು, ಮತ್ತು ಮೋವಾಬ್ಯ ಜನರನ್ನು ಸಾಮಾನ್ಯವಾಗಿ ಕೆಮೋಷಿನ ಜನರು ಎಂದು ಕರೆಯಲಾಗುತ್ತಿತ್ತು. ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
ಯೆರೆಮಿಯ 48 : 47 (IRVKN)
ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47