ಯೆರೆಮಿಯ 51 : 1 (IRVKN)
ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ [* ಲೇಬ್ ಕಾಮೈ ಕಸ್ಧೀಯರ ಅಥವಾ ಕಲ್ದೀಯರ ದೇಶದ ರಹಸ್ಯವಾದ ಹೆಸರು.] ದೇಶದವರ ಮೇಲೂ ನಾಶನದ ಗಾಳಿಯನ್ನು [† ನಾಶನದ ಗಾಳಿಯನ್ನು ನಾಶನದ ಆತ್ಮವನ್ನು.] ಬೀಸಮಾಡುವೆನು. [QBR]
ಯೆರೆಮಿಯ 51 : 2 (IRVKN)
ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. [QBR] ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ. [QBR]
ಯೆರೆಮಿಯ 51 : 3 (IRVKN)
ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. [QBR] ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ. [QBR]
ಯೆರೆಮಿಯ 51 : 4 (IRVKN)
ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು. [QBR]
ಯೆರೆಮಿಯ 51 : 5 (IRVKN)
ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, [QBR] ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. [QBR]
ಯೆರೆಮಿಯ 51 : 6 (IRVKN)
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. [QBR] ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು. [QBR]
ಯೆರೆಮಿಯ 51 : 7 (IRVKN)
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; [QBR] ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. [QBR]
ಯೆರೆಮಿಯ 51 : 8 (IRVKN)
ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; [QBR] ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು. [QBR]
ಯೆರೆಮಿಯ 51 : 9 (IRVKN)
ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; [QBR] ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; [QBR] ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ. [QBR]
ಯೆರೆಮಿಯ 51 : 10 (IRVKN)
ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; [QBR] ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ! [QBR]
ಯೆರೆಮಿಯ 51 : 11 (IRVKN)
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, [QBR] ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. [QBR] ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; [QBR] ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ [‡ ಗುರಾಣಿಗಳನ್ನು ಸನ್ನದ್ಧ ಮಾಡಿರಿ ಗುರಾಣಿಗಳನ್ನು ತೆಗೆದುಕೊಳ್ಳಿರಿ] ! [QBR]
ಯೆರೆಮಿಯ 51 : 12 (IRVKN)
ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, [QBR] ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; [QBR] ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ. [QBR]
ಯೆರೆಮಿಯ 51 : 13 (IRVKN)
ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, [QBR] ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು. [QBR]
ಯೆರೆಮಿಯ 51 : 14 (IRVKN)
ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, [QBR] ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
ಯೆರೆಮಿಯ 51 : 15 (IRVKN)
{ಯೆಹೋವನಿಗೆ ಸ್ತುತಿಗೀತೆ} [PS] ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ [QBR] ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ. [QBR]
ಯೆರೆಮಿಯ 51 : 16 (IRVKN)
ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; [QBR] ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; [QBR] ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. [QBR]
ಯೆರೆಮಿಯ 51 : 17 (IRVKN)
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; [QBR] ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; [QBR] ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. [QBR]
ಯೆರೆಮಿಯ 51 : 18 (IRVKN)
ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; [QBR] ದಂಡನೆಯಾಗುವಾಗ ಅಳಿದುಹೋಗುವವು. [QBR]
ಯೆರೆಮಿಯ 51 : 19 (IRVKN)
ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; [QBR] ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು. [QBR]
ಯೆರೆಮಿಯ 51 : 20 (IRVKN)
ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, [QBR] ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ; [QBR]
ಯೆರೆಮಿಯ 51 : 21 (IRVKN)
ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; [QBR] ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ; [QBR]
ಯೆರೆಮಿಯ 51 : 22 (IRVKN)
ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; [QBR] ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು; [QBR]
ಯೆರೆಮಿಯ 51 : 23 (IRVKN)
ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; [QBR] ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; [QBR] ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು; [QBR]
ಯೆರೆಮಿಯ 51 : 24 (IRVKN)
ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, [QBR] ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’ ” ಎಂದು ಯೆಹೋವನು ಅನ್ನುತ್ತಾನೆ. [QBR]
ಯೆರೆಮಿಯ 51 : 25 (IRVKN)
ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; [QBR] ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು. [QBR]
ಯೆರೆಮಿಯ 51 : 26 (IRVKN)
ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, [QBR] ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ. [QBR]
ಯೆರೆಮಿಯ 51 : 27 (IRVKN)
“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, [QBR] ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, [QBR] ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ. [QBR]
ಯೆರೆಮಿಯ 51 : 28 (IRVKN)
ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, [QBR] ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ. [QBR]
ಯೆರೆಮಿಯ 51 : 29 (IRVKN)
ದೇಶವೆಲ್ಲಾ ನೊಂದು ನಡುಗುತ್ತದೆ; [QBR] ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ. [QBR]
ಯೆರೆಮಿಯ 51 : 30 (IRVKN)
ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; [QBR] ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ. [QBR]
ಯೆರೆಮಿಯ 51 : 31 (IRVKN)
ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, [QBR] ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ, [QBR]
ಯೆರೆಮಿಯ 51 : 32 (IRVKN)
ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.” [QBR]
ಯೆರೆಮಿಯ 51 : 33 (IRVKN)
ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, [QBR] “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; [QBR] ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು. [QBR]
ಯೆರೆಮಿಯ 51 : 34 (IRVKN)
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, [QBR] ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, [QBR] ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ. [QBR]
ಯೆರೆಮಿಯ 51 : 35 (IRVKN)
ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; [QBR] ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
ಯೆರೆಮಿಯ 51 : 36 (IRVKN)
{ಬಾಬಿಲೋನಿಗೆ ಪ್ರತಿಕಾರ} [PS] ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; [QBR] ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. [QBR]
ಯೆರೆಮಿಯ 51 : 37 (IRVKN)
ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; [QBR] ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು. [QBR]
ಯೆರೆಮಿಯ 51 : 38 (IRVKN)
ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. [QBR]
ಯೆರೆಮಿಯ 51 : 39 (IRVKN)
ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, [QBR] ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ [QBR] ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ. [QBR]
ಯೆರೆಮಿಯ 51 : 40 (IRVKN)
“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು. [QBR]
ಯೆರೆಮಿಯ 51 : 41 (IRVKN)
ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ! [QBR]
ಯೆರೆಮಿಯ 51 : 42 (IRVKN)
ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ. [QBR]
ಯೆರೆಮಿಯ 51 : 43 (IRVKN)
ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. [QBR] ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು. [QBR]
ಯೆರೆಮಿಯ 51 : 44 (IRVKN)
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, [QBR] ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; [QBR] ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; [QBR] ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
ಯೆರೆಮಿಯ 51 : 45 (IRVKN)
{ಸೆರೆವಾಸಿಗಳಿಗೆ ಸಂದೇಶ} [PS] ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. [QBR]
ಯೆರೆಮಿಯ 51 : 46 (IRVKN)
ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; [QBR] ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; [QBR] ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು. [QBR]
ಯೆರೆಮಿಯ 51 : 47 (IRVKN)
ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. [QBR] ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು. [QBR]
ಯೆರೆಮಿಯ 51 : 48 (IRVKN)
ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; [QBR] ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.” [QBR]
ಯೆರೆಮಿಯ 51 : 49 (IRVKN)
“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, [QBR] ಹಾಗೆಯೇ ಬಾಬೆಲೂ ಹತವಾಗುವುದು. [QBR]
ಯೆರೆಮಿಯ 51 : 50 (IRVKN)
ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; [QBR] ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ. [QBR]
ಯೆರೆಮಿಯ 51 : 51 (IRVKN)
ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, [QBR] ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ [QBR] ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ? [QBR]
ಯೆರೆಮಿಯ 51 : 52 (IRVKN)
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; [QBR] ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. [QBR]
ಯೆರೆಮಿಯ 51 : 53 (IRVKN)
ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, [QBR] ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
ಯೆರೆಮಿಯ 51 : 54 (IRVKN)
{ಬಾಬೆಲಿನ ಸಂಪೂರ್ಣ ವಿನಾಶ} [PS] “ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ! [QBR]
ಯೆರೆಮಿಯ 51 : 55 (IRVKN)
ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; [QBR] ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ; [QBR]
ಯೆರೆಮಿಯ 51 : 56 (IRVKN)
ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, [QBR] ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, [QBR] ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ. [QBR]
ಯೆರೆಮಿಯ 51 : 57 (IRVKN)
ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, [QBR] ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; [QBR] ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು [QBR] ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.” [QBR]
ಯೆರೆಮಿಯ 51 : 58 (IRVKN)
ಸೇನಾಧೀಶ್ವರನಾದ ಯೆಹೋವನು, [QBR] “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. [QBR] ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, [QBR] ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
ಯೆರೆಮಿಯ 51 : 59 (IRVKN)
{ಯೆರೆಮೀಯನ ಸಂದೇಶವನ್ನು ಬಾಬಿಲೋನಿಗೆ ಕಳುಹಿಸಿದ್ದು} [PS] ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ [QBR] ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.) [PE][PS]
ಯೆರೆಮಿಯ 51 : 60 (IRVKN)
ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
ಯೆರೆಮಿಯ 51 : 61 (IRVKN)
ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
ಯೆರೆಮಿಯ 51 : 62 (IRVKN)
‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
ಯೆರೆಮಿಯ 51 : 63 (IRVKN)
ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
ಯೆರೆಮಿಯ 51 : 64 (IRVKN)
ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64

BG:

Opacity:

Color:


Size:


Font: