ಯೋವೇಲ 1 : 2 (IRVKN)
ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು. ಮಿಡತೆಗಳಿಂದಾದ ಹಾನಿ ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
ಯೋವೇಲ 1 : 3 (IRVKN)
ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.
ಯೋವೇಲ 1 : 4 (IRVKN)
ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
ಯೋವೇಲ 1 : 5 (IRVKN)
ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
ಯೋವೇಲ 1 : 6 (IRVKN)
ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು* ಜನಾಂಗವು ಮಿಡತೆಗಳ ಸೈನ್ಯವು. ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ † ಸಿಂಹದ ಹಲ್ಲುಗಳೇ ಪ್ರಕ 9:7-10 ನೋಡಿರಿ. ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.
ಯೋವೇಲ 1 : 7 (IRVKN)
ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
ಯೋವೇಲ 1 : 8 (IRVKN)
ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
ಯೋವೇಲ 1 : 9 (IRVKN)
ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
ಯೋವೇಲ 1 : 10 (IRVKN)
ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು‡ ನೆಲವು ದೇಶವು ದುಃಖದಲ್ಲಿ ಮುಳುಗಿದೆ. § ದುಃಖದಲ್ಲಿ ಮುಳುಗಿದೆ. ಬರುಡಾಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
ಯೋವೇಲ 1 : 11 (IRVKN)
ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
ಯೋವೇಲ 1 : 12 (IRVKN)
ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
ಯೋವೇಲ 1 : 13 (IRVKN)
ಜನರನ್ನು ಎಚ್ಚರಿಸಿ ಪ್ರಾರ್ಥನೆಗೆ ಆಹ್ವಾನಿಸಿದ್ದು ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
ಯೋವೇಲ 1 : 14 (IRVKN)
ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
ಯೋವೇಲ 1 : 15 (IRVKN)
ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
ಯೋವೇಲ 1 : 16 (IRVKN)
ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!
ಯೋವೇಲ 1 : 17 (IRVKN)
ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
ಯೋವೇಲ 1 : 18 (IRVKN)
ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
ಯೋವೇಲ 1 : 19 (IRVKN)
ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.
ಯೋವೇಲ 1 : 20 (IRVKN)
ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.
❮
❯
1
2
3
4
5
6
7
8
9
10
11
12
13
14
15
16
17
18
19
20