ಯೋವೇಲ 2 : 1 (IRVKN)
ಮಿಡತೆ ದಂಡಿನ ವರ್ಣನೆ ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.
ಯೋವೇಲ 2 : 2 (IRVKN)
ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.
ಯೋವೇಲ 2 : 3 (IRVKN)
ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.
ಯೋವೇಲ 2 : 4 (IRVKN)
ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.
ಯೋವೇಲ 2 : 5 (IRVKN)
ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
ಯೋವೇಲ 2 : 6 (IRVKN)
ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.
ಯೋವೇಲ 2 : 7 (IRVKN)
ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;
ಯೋವೇಲ 2 : 8 (IRVKN)
ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.
ಯೋವೇಲ 2 : 9 (IRVKN)
ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.
ಯೋವೇಲ 2 : 10 (IRVKN)
ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.
ಯೋವೇಲ 2 : 11 (IRVKN)
ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?
ಯೋವೇಲ 2 : 12 (IRVKN)
ಪಶ್ಚಾತ್ತಾಪಕ್ಕೆ ಕರೆ ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
ಯೋವೇಲ 2 : 13 (IRVKN)
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
ಯೋವೇಲ 2 : 14 (IRVKN)
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
ಯೋವೇಲ 2 : 15 (IRVKN)
ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.
ಯೋವೇಲ 2 : 16 (IRVKN)
ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.
ಯೋವೇಲ 2 : 17 (IRVKN)
ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
ಯೋವೇಲ 2 : 18 (IRVKN)
ಯೆಹೋವನ ವಾಗ್ದಾನ ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,
ಯೋವೇಲ 2 : 19 (IRVKN)
ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.
ಯೋವೇಲ 2 : 20 (IRVKN)
ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
ಯೋವೇಲ 2 : 21 (IRVKN)
ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
ಯೋವೇಲ 2 : 22 (IRVKN)
ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
ಯೋವೇಲ 2 : 23 (IRVKN)
ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ* ನೀತಿಯಿಂದ ನೀತಿಯ ಬೋಧಕರಿಂದ. ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
ಯೋವೇಲ 2 : 24 (IRVKN)
ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.
ಯೋವೇಲ 2 : 25 (IRVKN)
ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
ಯೋವೇಲ 2 : 26 (IRVKN)
ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
ಯೋವೇಲ 2 : 27 (IRVKN)
ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
ಯೋವೇಲ 2 : 28 (IRVKN)
ಯೆಹೋವನ ದಿನ ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಯೋವೇಲ 2 : 29 (IRVKN)
ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.
ಯೋವೇಲ 2 : 30 (IRVKN)
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
ಯೋವೇಲ 2 : 31 (IRVKN)
ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
ಯೋವೇಲ 2 : 32 (IRVKN)
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32