ಯೋಹಾನನು 1 : 1 (IRVKN)
ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು * ಆದಿ 1:1; 1 ಯೋಹಾ 1:1: ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
ಯೋಹಾನನು 1 : 2 (IRVKN)
ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.
ಯೋಹಾನನು 1 : 3 (IRVKN)
ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
ಯೋಹಾನನು 1 : 4 (IRVKN)
ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
ಯೋಹಾನನು 1 : 5 (IRVKN)
† ಯೋಹಾ 3:19: ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ‡ ಅಥವಾ, ಗ್ರಹಿಸಲಿಲ್ಲ. ಮುಸುಕಲಿಲ್ಲ.
ಯೋಹಾನನು 1 : 6 (IRVKN)
ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.
ಯೋಹಾನನು 1 : 7 (IRVKN)
ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
ಯೋಹಾನನು 1 : 8 (IRVKN)
ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
ಯೋಹಾನನು 1 : 9 (IRVKN)
ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
ಯೋಹಾನನು 1 : 10 (IRVKN)
ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
ಯೋಹಾನನು 1 : 11 (IRVKN)
ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.
ಯೋಹಾನನು 1 : 12 (IRVKN)
ಆದರೂ ಯಾರಾರು ಆತನನ್ನು § ಅಥವಾ, ಅಂಗೀಕರಿಸಿದರೋ. ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
ಯೋಹಾನನು 1 : 13 (IRVKN)
ಇವರು ರಕ್ತಸಂಬಂಧದಿಂದಾಗಲಿ, * ಅಥವಾ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ಯೋಹಾನನು 1 : 15 (IRVKN)
ಆ ವಾಕ್ಯವೆಂಬುವವನು † ದೇಹಧಾರಿಯಾಗಿ, ಮಾಂಸಧಾರಿ, ಅಥವಾ, ಆತ್ಮ ಪ್ರಾಣ, ಶರೀರ ಒಳಗೊಂಡ. ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಯೋಹಾನನು 1 : 16 (IRVKN)
ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ ‡ ಯೋಹಾ 1:30; ಮತ್ತಾ 3:11; ಮಾರ್ಕ 1:7; ಲೂಕ 3:16: “ ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
ಯೋಹಾನನು 1 : 17 (IRVKN)
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
ಯೋಹಾನನು 1 : 18 (IRVKN)
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಯೋಹಾನನು 1 : 19 (IRVKN)
ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
ಯೋಹಾನನು 1 : 20 (IRVKN)
ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
ಯೋಹಾನನು 1 : 21 (IRVKN)
ಅದಕ್ಕೆ ಅವರು, “ಹಾಗಾದರೆ ನೀನು ಯಾರು? § ಮಲಾ. 4:5: ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ * ಧರ್ಮೋ 18:15: ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
ಯೋಹಾನನು 1 : 22 (IRVKN)
ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
ಯೋಹಾನನು 1 : 23 (IRVKN)
ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, [† ಯೆಶಾ 40 3: ] ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’ ” ಎಂದು ಉತ್ತರ ಕೊಟ್ಟನು.
ಯೋಹಾನನು 1 : 24 (IRVKN)
ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
ಯೋಹಾನನು 1 : 25 (IRVKN)
ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
ಯೋಹಾನನು 1 : 26 (IRVKN)
ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.
ಯೋಹಾನನು 1 : 27 (IRVKN)
ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
ಯೋಹಾನನು 1 : 28 (IRVKN)
ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
ಯೋಹಾನನು 1 : 29 (IRVKN)
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ‡ ಯೋಹಾ 1:36; ಆದಿ 22:8; ವಿಮೋ 12:3; ಯೆಶಾ 53:4-12: ಯಜ್ಞದಕುರಿಮರಿ.
ಯೋಹಾನನು 1 : 30 (IRVKN)
‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
ಯೋಹಾನನು 1 : 31 (IRVKN)
ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
ಯೋಹಾನನು 1 : 32 (IRVKN)
ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
ಯೋಹಾನನು 1 : 33 (IRVKN)
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ § ಮತ್ತಾ 3:11; ಮಾರ್ಕ 1:8; ಲೂಕ 3:16; ಅ. ಕೃ. 1:5: ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
ಯೋಹಾನನು 1 : 34 (IRVKN)
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
ಯೋಹಾನನು 1 : 35 (IRVKN)
ಯೇಸುವಿನ ಪ್ರಥಮ ಶಿಷ್ಯರು ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,
ಯೋಹಾನನು 1 : 36 (IRVKN)
ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
ಯೋಹಾನನು 1 : 37 (IRVKN)
ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
ಯೋಹಾನನು 1 : 38 (IRVKN)
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
ಯೋಹಾನನು 1 : 39 (IRVKN)
ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ * ಮೂಲ: ಹತ್ತು ತಾಸಾಗಿತ್ತು. ಸಂಜೆ ನಾಲ್ಕು ಗಂಟೆಯಾಗಿತ್ತು.
ಯೋಹಾನನು 1 : 40 (IRVKN)
ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.
ಯೋಹಾನನು 1 : 41 (IRVKN)
ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ † ಕ್ರಿಸ್ತನು ಎಂದರೆ ಅಭಿಷೇಕ ಹೊಂದಿದವನು, ಬರಬೇಕಾದ ರಕ್ಷಕನು. ಕ್ರಿಸ್ತನು) ಎಂದು ಹೇಳಿ,
ಯೋಹಾನನು 1 : 42 (IRVKN)
ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ‡ ಪೇತ್ರ ಎಂದರೆ ಗುಂಡು ಅಥವಾ ಬಂಡೆಗಲ್ಲು. ಮತ್ತಾ 16:18: ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
ಯೋಹಾನನು 1 : 43 (IRVKN)
ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.
ಯೋಹಾನನು 1 : 44 (IRVKN)
ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.
ಯೋಹಾನನು 1 : 45 (IRVKN)
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
ಯೋಹಾನನು 1 : 46 (IRVKN)
ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
ಯೋಹಾನನು 1 : 47 (IRVKN)
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ,§ ರೋಮಾ. 9:4,6: ಇವನು ನಿಜವಾದ ಇಸ್ರಾಯೇಲನು, * ಕೀರ್ತ 32:2: ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
ಯೋಹಾನನು 1 : 48 (IRVKN)
ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
ಯೋಹಾನನು 1 : 49 (IRVKN)
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
ಯೋಹಾನನು 1 : 50 (IRVKN)
ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
ಯೋಹಾನನು 1 : 51 (IRVKN)
ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.† ಯೆಹೆ. 1:1: ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ‡ ಆದಿ 28:12: ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51