ಯೋಹಾನನು 10 : 1 (IRVKN)
ಒಳ್ಳೆಯ ಕುರುಬನು “ನಿಮಗೆ* ಅಥವಾ, ಸತ್ಯವಾಗಿ. ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.
ಯೋಹಾನನು 10 : 2 (IRVKN)
ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.
ಯೋಹಾನನು 10 : 3 (IRVKN)
ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
ಯೋಹಾನನು 10 : 4 (IRVKN)
ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
ಯೋಹಾನನು 10 : 5 (IRVKN)
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.
ಯೋಹಾನನು 10 : 6 (IRVKN)
ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.
ಯೋಹಾನನು 10 : 7 (IRVKN)
ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,
ಯೋಹಾನನು 10 : 8 (IRVKN)
ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ಯೋಹಾನನು 10 : 9 (IRVKN)
ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
ಯೋಹಾನನು 10 : 10 (IRVKN)
ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
ಯೋಹಾನನು 10 : 11 (IRVKN)
[† ಯೋಹಾ 10:15,17; ಯೆಶಾ 40 11; ಇಬ್ರಿ. 13:20: ]“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಯೋಹಾನನು 10 : 12 (IRVKN)
ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.
ಯೋಹಾನನು 10 : 13 (IRVKN)
ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.
ಯೋಹಾನನು 10 : 14 (IRVKN)
ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
ಯೋಹಾನನು 10 : 15 (IRVKN)
ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
ಯೋಹಾನನು 10 : 16 (IRVKN)
ಇದಲ್ಲದೆ ಯೋಹಾ 11:5 2; ಯೆಶಾ 56:8; ಎಫೆ 2:13-18: ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ § ಅಥವಾ, ಮಂದೆ. ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
ಯೋಹಾನನು 10 : 17 (IRVKN)
* ಫಿಲಿ. 2:9: ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.
ಯೋಹಾನನು 10 : 18 (IRVKN)
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
ಯೋಹಾನನು 10 : 19 (IRVKN)
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.
ಯೋಹಾನನು 10 : 20 (IRVKN)
ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.
ಯೋಹಾನನು 10 : 21 (IRVKN)
ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
ಯೋಹಾನನು 10 : 22 (IRVKN)
ಯೇಸು ತಿರಸ್ಕರಿಸಲ್ಪಟ್ಟಿದ್ದು ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.
ಯೋಹಾನನು 10 : 23 (IRVKN)
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,
ಯೋಹಾನನು 10 : 24 (IRVKN)
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
ಯೋಹಾನನು 10 : 25 (IRVKN)
ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.
ಯೋಹಾನನು 10 : 26 (IRVKN)
ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.
ಯೋಹಾನನು 10 : 27 (IRVKN)
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
ಯೋಹಾನನು 10 : 28 (IRVKN)
ಯೋಹಾ 5:24; 17:12: ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಯೋಹಾನನು 10 : 29 (IRVKN)
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಕೆಲವು ಪ್ರತಿಗಳಲ್ಲಿ, ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ದೊಡ್ಡವನಾಗಿದ್ದಾನೆ; ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
ಯೋಹಾನನು 10 : 30 (IRVKN)
ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
ಯೋಹಾನನು 10 : 31 (IRVKN)
ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
ಯೋಹಾನನು 10 : 32 (IRVKN)
ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,
ಯೋಹಾನನು 10 : 33 (IRVKN)
ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
ಯೋಹಾನನು 10 : 34 (IRVKN)
ಅದಕ್ಕೆ ಯೇಸು, § ಕೀರ್ತ 82:6: “ ‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?
ಯೋಹಾನನು 10 : 35 (IRVKN)
ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ
ಯೋಹಾನನು 10 : 36 (IRVKN)
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’
ಯೋಹಾನನು 10 : 37 (IRVKN)
ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ
ಯೋಹಾನನು 10 : 38 (IRVKN)
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
ಯೋಹಾನನು 10 : 39 (IRVKN)
[* ಯೋಹಾ 7:30,44; 8:59; ಲೂಕ 4:29, 30 ]ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.
ಯೋಹಾನನು 10 : 40 (IRVKN)
ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.
ಯೋಹಾನನು 10 : 41 (IRVKN)
ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.
ಯೋಹಾನನು 10 : 42 (IRVKN)
ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42