ಯೋಹಾನನು 11 : 1 (IRVKN)
{ಲಾಜರನ ಮರಣ} [PS] ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
ಯೋಹಾನನು 11 : 2 (IRVKN)
[* ಯೋಹಾ 12:3; ಮತ್ತಾ 26:7; ಮಾರ್ಕ 14:3:] ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
ಯೋಹಾನನು 11 : 3 (IRVKN)
ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
ಯೋಹಾನನು 11 : 4 (IRVKN)
ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
ಯೋಹಾನನು 11 : 5 (IRVKN)
ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
ಯೋಹಾನನು 11 : 6 (IRVKN)
ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
ಯೋಹಾನನು 11 : 7 (IRVKN)
ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
ಯೋಹಾನನು 11 : 8 (IRVKN)
ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ [† ಯೋಹಾ 8:59; 10:31:] ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
ಯೋಹಾನನು 11 : 9 (IRVKN)
ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
ಯೋಹಾನನು 11 : 10 (IRVKN)
ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
ಯೋಹಾನನು 11 : 11 (IRVKN)
ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
ಯೋಹಾನನು 11 : 12 (IRVKN)
ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
ಯೋಹಾನನು 11 : 13 (IRVKN)
ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
ಯೋಹಾನನು 11 : 14 (IRVKN)
ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
ಯೋಹಾನನು 11 : 15 (IRVKN)
ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
ಯೋಹಾನನು 11 : 16 (IRVKN)
ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು. [PS]
ಯೋಹಾನನು 11 : 17 (IRVKN)
{ಮಾರ್ಥ ಮತ್ತು ಮರಿಯಳನ್ನು ಯೇಸು ಸಂತೈಸಿದ್ದು} [PS] ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
ಯೋಹಾನನು 11 : 18 (IRVKN)
ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು [‡ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು. ಹದಿನೈದು ಸ್ತಾದ್ಯಗಳು. ಎರಡು ಮೈಲಿಗಳು. ] ಹರಿದಾರಿಯಷ್ಟು ಅಂತರವಿತ್ತು.
ಯೋಹಾನನು 11 : 19 (IRVKN)
ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
ಯೋಹಾನನು 11 : 20 (IRVKN)
ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
ಯೋಹಾನನು 11 : 21 (IRVKN)
ಆಗ ಮಾರ್ಥಳು ಯೇಸುವಿಗೆ, [§ ಯೋಹಾ 11:32:] “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
ಯೋಹಾನನು 11 : 22 (IRVKN)
ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
ಯೋಹಾನನು 11 : 23 (IRVKN)
ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
ಯೋಹಾನನು 11 : 24 (IRVKN)
ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
ಯೋಹಾನನು 11 : 25 (IRVKN)
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
ಯೋಹಾನನು 11 : 26 (IRVKN)
ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,
ಯೋಹಾನನು 11 : 27 (IRVKN)
ಆಕೆಯು ಆತನಿಗೆ, “ಹೌದು ಕರ್ತನೇ, [* ಯೋಹಾ 6:69; ಮತ್ತಾ 16:16; ಮಾರ್ಕ 8:29; ಲೂಕ 9:20:] ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು. [PE][PS]
ಯೋಹಾನನು 11 : 28 (IRVKN)
ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
ಯೋಹಾನನು 11 : 29 (IRVKN)
ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
ಯೋಹಾನನು 11 : 30 (IRVKN)
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
ಯೋಹಾನನು 11 : 31 (IRVKN)
ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
ಯೋಹಾನನು 11 : 32 (IRVKN)
ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
ಯೋಹಾನನು 11 : 33 (IRVKN)
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
ಯೋಹಾನನು 11 : 34 (IRVKN)
“ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
ಯೋಹಾನನು 11 : 35 (IRVKN)
ಯೇಸು ಕಣ್ಣೀರಿಟ್ಟನು.
ಯೋಹಾನನು 11 : 36 (IRVKN)
ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
ಯೋಹಾನನು 11 : 37 (IRVKN)
ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು. [PS]
ಯೋಹಾನನು 11 : 38 (IRVKN)
{ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು} [PS] ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
ಯೋಹಾನನು 11 : 39 (IRVKN)
ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
ಯೋಹಾನನು 11 : 40 (IRVKN)
ಯೇಸು ಆಕೆಗೆ, [† ಯೋಹಾ 11:4, 23, 26:] “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
ಯೋಹಾನನು 11 : 41 (IRVKN)
ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಯೋಹಾನನು 11 : 42 (IRVKN)
ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
ಯೋಹಾನನು 11 : 43 (IRVKN)
ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
ಯೋಹಾನನು 11 : 44 (IRVKN)
ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು. ಯೆಹೂದ್ಯರ ಹಿರೀಸಭೆಯವರು ಯೇಸುವನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡಿದ್ದು; [PE][PS]
ಯೋಹಾನನು 11 : 45 (IRVKN)
ಆದುದರಿಂದ [‡ ಯೋಹಾ 11:19, 31.] ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
ಯೋಹಾನನು 11 : 46 (IRVKN)
ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
ಯೋಹಾನನು 11 : 47 (IRVKN)
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
ಯೋಹಾನನು 11 : 48 (IRVKN)
ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
ಯೋಹಾನನು 11 : 49 (IRVKN)
ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ [§ ಮತ್ತಾ 26:3,57.] ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
ಯೋಹಾನನು 11 : 50 (IRVKN)
ಇಡೀ [* ಯೋಹಾ 18:14.] ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
ಯೋಹಾನನು 11 : 51 (IRVKN)
ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
ಯೋಹಾನನು 11 : 52 (IRVKN)
ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
ಯೋಹಾನನು 11 : 53 (IRVKN)
ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
ಯೋಹಾನನು 11 : 54 (IRVKN)
ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. [PE][PS]
ಯೋಹಾನನು 11 : 55 (IRVKN)
ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
ಯೋಹಾನನು 11 : 56 (IRVKN)
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
ಯೋಹಾನನು 11 : 57 (IRVKN)
ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57

BG:

Opacity:

Color:


Size:


Font: