ಯೋಹಾನನು 12 : 1 (IRVKN)
ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು * ಮತ್ತಾ 26:6-12; ಮಾರ್ಕ 14:3-8: ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
ಯೋಹಾನನು 12 : 2 (IRVKN)
ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
ಯೋಹಾನನು 12 : 3 (IRVKN)
ಆಗ ಮರಿಯಳು ಬಹು ಬೆಲೆಯುಳ್ಳ ಸುಗಂಧದ್ರವ್ಯ, ನಾರ್ಡೊಸ್ಟಾಕಿಸ್ ಎಂಬ ಮೂಲಿಕೆಯಿಂದ ತಯಾರಿಸಲಾಗಿದೆ. ಸ್ವಚ್ಛ ಜಟಮಾಂಸಿ ತೈಲವನ್ನು ‡ ಸುಮಾರು ಅರ್ಧ ಲೀಟರಿನಷ್ಟು. ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
ಯೋಹಾನನು 12 : 4 (IRVKN)
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
ಯೋಹಾನನು 12 : 5 (IRVKN)
“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
ಯೋಹಾನನು 12 : 6 (IRVKN)
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
ಯೋಹಾನನು 12 : 7 (IRVKN)
ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
ಯೋಹಾನನು 12 : 8 (IRVKN)
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
ಯೋಹಾನನು 12 : 9 (IRVKN)
ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
ಯೋಹಾನನು 12 : 10 (IRVKN)
ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
ಯೋಹಾನನು 12 : 11 (IRVKN)
ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
ಯೋಹಾನನು 12 : 12 (IRVKN)
ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು
ಮತ್ತಾ 21:4-9; ಮಾರ್ಕ 11:7-10; ಲೂಕ 19:35-38
ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
ಯೋಹಾನನು 12 : 13 (IRVKN)
ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, § ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ.
ಕೀರ್ತ 118:25, 26:
“ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
ಯೋಹಾನನು 12 : 14 (IRVKN)
ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
ಯೋಹಾನನು 12 : 15 (IRVKN)
ಹೀಗೆ, * ಜೆಕ. 9:9: “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
ಯೋಹಾನನು 12 : 16 (IRVKN)
ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
ಯೋಹಾನನು 12 : 17 (IRVKN)
ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
ಯೋಹಾನನು 12 : 18 (IRVKN)
ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
ಯೋಹಾನನು 12 : 19 (IRVKN)
ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಯೋಹಾನನು 12 : 20 (IRVKN)
ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
ಯೋಹಾನನು 12 : 21 (IRVKN)
ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
ಯೋಹಾನನು 12 : 22 (IRVKN)
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
ಯೋಹಾನನು 12 : 23 (IRVKN)
ಆಗ ಯೇಸು ಅವರಿಗೆ, ಯೋಹಾ 12:27; 17:1: “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
ಯೋಹಾನನು 12 : 24 (IRVKN)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
ಯೋಹಾನನು 12 : 25 (IRVKN)
ಮತ್ತಾ 10:39; 16:25; ಮಾರ್ಕ 8:35; ಲೂಕ 9:24; 17:33: ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ಯೋಹಾನನು 12 : 26 (IRVKN)
ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಯೋಹಾನನು 12 : 27 (IRVKN)
ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
ಯೋಹಾನನು 12 : 28 (IRVKN)
ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
ಯೋಹಾನನು 12 : 29 (IRVKN)
ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
ಯೋಹಾನನು 12 : 30 (IRVKN)
ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
ಯೋಹಾನನು 12 : 31 (IRVKN)
§ ಯೋಹಾ 16:11: ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. * ಲೂಕ 10:18; ಎಫೆ 2:2: ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
ಯೋಹಾನನು 12 : 32 (IRVKN)
ಆದರೆ ಯೋಹಾ 3:14; 8:28: ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
ಯೋಹಾನನು 12 : 33 (IRVKN)
ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
ಯೋಹಾನನು 12 : 34 (IRVKN)
ಅದಕ್ಕೆ ಆ ಜನರು, ಕೀರ್ತ 89:36, 37; 110:4: “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
ಯೋಹಾನನು 12 : 35 (IRVKN)
ಆಗ ಯೇಸು ಅವರಿಗೆ, § ಯೋಹಾ 12:46; ಎಫೆ 5:8; ಯೆರೆ 13:16: “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಯೋಹಾನನು 12 : 36 (IRVKN)
ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
ಯೋಹಾನನು 12 : 37 (IRVKN)
ಯೆಹೂದ್ಯರ ಅಪನಂಬಿಕೆ ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
ಯೋಹಾನನು 12 : 38 (IRVKN)
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, * ಯೆಶಾ 53:1: “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ † ಅಥವಾ, ತೋಳು. ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
ಯೋಹಾನನು 12 : 39 (IRVKN)
ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
ಯೋಹಾನನು 12 : 40 (IRVKN)
ಯೆಶಾ 6:9, 10: “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
ಯೋಹಾನನು 12 : 41 (IRVKN)
§ ಯೆಶಾ 6:1: ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
ಯೋಹಾನನು 12 : 42 (IRVKN)
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
ಯೋಹಾನನು 12 : 43 (IRVKN)
ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
ಯೋಹಾನನು 12 : 44 (IRVKN)
ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
ಯೋಹಾನನು 12 : 45 (IRVKN)
ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
ಯೋಹಾನನು 12 : 46 (IRVKN)
ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಯೋಹಾನನು 12 : 47 (IRVKN)
ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
ಯೋಹಾನನು 12 : 48 (IRVKN)
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
ಯೋಹಾನನು 12 : 49 (IRVKN)
ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
ಯೋಹಾನನು 12 : 50 (IRVKN)
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50