ಯೋಹಾನನು 13 : 1 (IRVKN)
ಯೇಸು ತನ್ನ ಶಿಷ್ಯರ ಕಾಲುಗಳನ್ನು ತೊಳೆದದ್ದು ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
ಯೋಹಾನನು 13 : 2 (IRVKN)
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ * ಯೋಹಾ 13:27; ಲೂಕ 22:3: ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
ಯೋಹಾನನು 13 : 3 (IRVKN)
ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
ಯೋಹಾನನು 13 : 4 (IRVKN)
ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
ಯೋಹಾನನು 13 : 5 (IRVKN)
ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
ಯೋಹಾನನು 13 : 6 (IRVKN)
ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
ಯೋಹಾನನು 13 : 7 (IRVKN)
ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
ಯೋಹಾನನು 13 : 8 (IRVKN)
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
ಯೋಹಾನನು 13 : 9 (IRVKN)
ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
ಯೋಹಾನನು 13 : 10 (IRVKN)
ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
ಯೋಹಾನನು 13 : 11 (IRVKN)
ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
ಯೋಹಾನನು 13 : 12 (IRVKN)
ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
ಯೋಹಾನನು 13 : 13 (IRVKN)
ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
ಯೋಹಾನನು 13 : 14 (IRVKN)
ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
ಯೋಹಾನನು 13 : 15 (IRVKN)
ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
ಯೋಹಾನನು 13 : 16 (IRVKN)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
ಯೋಹಾನನು 13 : 17 (IRVKN)
ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ಯೋಹಾನನು 13 : 18 (IRVKN)
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ಕೀರ್ತ 41:9: ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
ಯೋಹಾನನು 13 : 19 (IRVKN)
ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
ಯೋಹಾನನು 13 : 20 (IRVKN)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
ಯೋಹಾನನು 13 : 21 (IRVKN)
ಯೇಸು ತನ್ನನ್ನು ಹಿಡಿದುಕೊಡುವವನನ್ನು ಸೂಚಿಸಿದ್ದು ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ಮತ್ತಾ 26:21-25; ಮಾರ್ಕ 14:18-20; ಲೂಕ 22:21-23: ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
ಯೋಹಾನನು 13 : 22 (IRVKN)
ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
ಯೋಹಾನನು 13 : 23 (IRVKN)
ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
ಯೋಹಾನನು 13 : 24 (IRVKN)
ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
ಯೋಹಾನನು 13 : 25 (IRVKN)
ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
ಯೋಹಾನನು 13 : 26 (IRVKN)
ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
ಯೋಹಾನನು 13 : 27 (IRVKN)
ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
ಯೋಹಾನನು 13 : 28 (IRVKN)
ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
ಯೋಹಾನನು 13 : 29 (IRVKN)
ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
ಯೋಹಾನನು 13 : 30 (IRVKN)
ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
ಯೋಹಾನನು 13 : 31 (IRVKN)
ಹೊಸ ಆಜ್ಞೆ ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು§ ಯೋಹಾ 14:13; 15:8; 17:1,4: ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
ಯೋಹಾನನು 13 : 32 (IRVKN)
ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು* ಯೋಹಾ 17:1,5; 12:23: ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
ಯೋಹಾನನು 13 : 33 (IRVKN)
ನನ್ನ ಮಕ್ಕಳೇ, ಯೋಹಾ 7:33,34; 14:19; 16:16: ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
ಯೋಹಾನನು 13 : 34 (IRVKN)
ರೋಮಾ. 13:8; 1 ಯೋಹಾ 3:23: ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
ಯೋಹಾನನು 13 : 35 (IRVKN)
ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
ಯೋಹಾನನು 13 : 36 (IRVKN)
ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
ಯೋಹಾನನು 13 : 37 (IRVKN)
§ ಮತ್ತಾ 26:33-35; ಮಾರ್ಕ 14:29-31; ಲೂಕ 22:33,34: ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
ಯೋಹಾನನು 13 : 38 (IRVKN)
ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38