ಯೋಹಾನನು 14 : 1 (IRVKN)
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ಯೋಹಾನನು 14 : 2 (IRVKN)
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
ಯೋಹಾನನು 14 : 3 (IRVKN)
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು* ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16: ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
ಯೋಹಾನನು 14 : 4 (IRVKN)
ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
ಯೋಹಾನನು 14 : 5 (IRVKN)
ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
ಯೋಹಾನನು 14 : 6 (IRVKN)
ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು† ಯೋಹಾ 11:25: ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ಯೋಹಾನನು 14 : 7 (IRVKN)
‡ ಯೋಹಾ 8:19 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
ಯೋಹಾನನು 14 : 8 (IRVKN)
ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
ಯೋಹಾನನು 14 : 9 (IRVKN)
ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
ಯೋಹಾನನು 14 : 10 (IRVKN)
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
ಯೋಹಾನನು 14 : 11 (IRVKN)
ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.§ ಯೋಹಾ 5:36: ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
ಯೋಹಾನನು 14 : 12 (IRVKN)
“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;* ಮತ್ತಾ 17:20; 21:21; ಮಾರ್ಕ 11:23: ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
ಯೋಹಾನನು 14 : 13 (IRVKN)
† ಯೋಹಾ 15:16; 16:23,24: ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
ಯೋಹಾನನು 14 : 14 (IRVKN)
ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
ಯೋಹಾನನು 14 : 15 (IRVKN)
“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
ಯೋಹಾನನು 14 : 16 (IRVKN)
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.
ಯೋಹಾನನು 14 : 17 (IRVKN)
ಆ ಸಹಾಯಕನು ಯಾರೆಂದರೆ‡ ಯೋಹಾ 14:25; 15:26; 16:7: ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
ಯೋಹಾನನು 14 : 18 (IRVKN)
“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
ಯೋಹಾನನು 14 : 19 (IRVKN)
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
ಯೋಹಾನನು 14 : 20 (IRVKN)
ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
ಯೋಹಾನನು 14 : 21 (IRVKN)
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
ಯೋಹಾನನು 14 : 22 (IRVKN)
ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
ಯೋಹಾನನು 14 : 23 (IRVKN)
ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
ಯೋಹಾನನು 14 : 24 (IRVKN)
ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
ಯೋಹಾನನು 14 : 25 (IRVKN)
“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
ಯೋಹಾನನು 14 : 26 (IRVKN)
ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
ಯೋಹಾನನು 14 : 27 (IRVKN)
“ನಾನು ನನ್ನ§ ಯೋಹಾ 16:33; 20:19,21,26; ಲೂಕ 24:36 ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಯೋಹಾನನು 14 : 28 (IRVKN)
ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
ಯೋಹಾನನು 14 : 29 (IRVKN)
ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.
ಯೋಹಾನನು 14 : 30 (IRVKN)
ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ* ಯೋಹಾ 12:31; 16:11; ಎಫೆ 2:2: ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
ಯೋಹಾನನು 14 : 31 (IRVKN)
ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31