ಯೋಹಾನನು 16 : 1 (IRVKN)
[PS] [SCJ]“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.[SCJ.]
ಯೋಹಾನನು 16 : 2 (IRVKN)
[* ಯೋಹಾ 9:22; 12:42; ಅ. ಕೃ. 9:1, 2; 26:9-11: ][SCJ]ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.[SCJ.]
ಯೋಹಾನನು 16 : 3 (IRVKN)
[SCJ]ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.[SCJ.]
ಯೋಹಾನನು 16 : 4 (IRVKN)
[SCJ]ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.[SCJ.] [PE]
ಯೋಹಾನನು 16 : 5 (IRVKN)
[PS] [SCJ]“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.[SCJ.]
ಯೋಹಾನನು 16 : 6 (IRVKN)
[SCJ]ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.[SCJ.]
ಯೋಹಾನನು 16 : 7 (IRVKN)
[SCJ]ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ[SCJ.][† ಯೋಹಾ 15:26: ][SCJ]ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.[SCJ.]
ಯೋಹಾನನು 16 : 8 (IRVKN)
[SCJ]ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.[SCJ.]
ಯೋಹಾನನು 16 : 9 (IRVKN)
[SCJ]ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ[SCJ.]
ಯೋಹಾನನು 16 : 10 (IRVKN)
[SCJ]ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,[SCJ.]
ಯೋಹಾನನು 16 : 11 (IRVKN)
[‡ ಯೋಹಾ 12:31: ][SCJ]ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.[SCJ.] [PE]
ಯೋಹಾನನು 16 : 12 (IRVKN)
[PS] [SCJ]“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.[SCJ.]
ಯೋಹಾನನು 16 : 13 (IRVKN)
[SCJ]ಆದರೆ[SCJ.][§ ಯೋಹಾ 14:17: ][SCJ]ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.[SCJ.]
ಯೋಹಾನನು 16 : 14 (IRVKN)
[SCJ]ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ[SCJ.][* ಯೋಹಾ 7:39: ][SCJ]ನನ್ನನ್ನೇ ಮಹಿಮೆಪಡಿಸುವನು.[SCJ.]
ಯೋಹಾನನು 16 : 15 (IRVKN)
[† ಯೋಹಾ 17:10: ][SCJ]ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.[SCJ.]
ಯೋಹಾನನು 16 : 16 (IRVKN)
[SCJ]ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ”[SCJ.] ಎಂದನು. [PE]
ಯೋಹಾನನು 16 : 17 (IRVKN)
[PS]ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? [SCJ]‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’[SCJ.] ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
ಯೋಹಾನನು 16 : 18 (IRVKN)
[SCJ]“ ‘ಸ್ವಲ್ಪ ಕಾಲವೆಂದು’[SCJ.] ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
ಯೋಹಾನನು 16 : 19 (IRVKN)
ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, [SCJ]“ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?[SCJ.]
ಯೋಹಾನನು 16 : 20 (IRVKN)
[SCJ]ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.[SCJ.][‡ ಮಾರ್ಕ 16:10: ][SCJ]ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ[SCJ.] [§ ಲೂಕ 24:41, 52: ][SCJ]ನಿಮ್ಮ ದುಃಖವು ಹೋಗಿ ಆನಂದ ಬರುವುದು.[SCJ.]
ಯೋಹಾನನು 16 : 21 (IRVKN)
[SCJ]ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.[SCJ.]
ಯೋಹಾನನು 16 : 22 (IRVKN)
[SCJ]ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.[SCJ.]
ಯೋಹಾನನು 16 : 23 (IRVKN)
[SCJ]ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,[SCJ.][* ಯೋಹಾ 14:13; 15:16: ][SCJ]ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.[SCJ.]
ಯೋಹಾನನು 16 : 24 (IRVKN)
[SCJ]ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.[SCJ.] [PE]
ಯೋಹಾನನು 16 : 25 (IRVKN)
[PS] [SCJ]“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.[SCJ.]
ಯೋಹಾನನು 16 : 26 (IRVKN)
[SCJ]ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.[SCJ.]
ಯೋಹಾನನು 16 : 27 (IRVKN)
[SCJ]ನೀವು ನನ್ನನ್ನು ಪ್ರೀತಿಸಿ[SCJ.][† ಯೋಹಾ 16:30; 8:42; 17, 8: ][SCJ]ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ[SCJ.] [‡ ಯೋಹಾ 14:21, 23; 17:23: ][SCJ]ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.[SCJ.]
ಯೋಹಾನನು 16 : 28 (IRVKN)
[SCJ]ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ”[SCJ.] ಎಂದನು. [PE]
ಯೋಹಾನನು 16 : 29 (IRVKN)
[PS]ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.
ಯೋಹಾನನು 16 : 30 (IRVKN)
ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು. [PE]
ಯೋಹಾನನು 16 : 31 (IRVKN)
[PS]ಅದಕ್ಕೆ ಯೇಸು, [SCJ]“ಈಗ ನೀವು ನಂಬುತ್ತೀರಿ.[SCJ.]
ಯೋಹಾನನು 16 : 32 (IRVKN)
[SCJ]ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.[SCJ.][§ ಯೋಹಾ 8:16, 29: ][SCJ]ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.[SCJ.]
ಯೋಹಾನನು 16 : 33 (IRVKN)
[* ಯೋಹಾ 14:27; ಕೊಲೊ 3:15: ][SCJ]ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.[SCJ.] [† ಯೋಹಾ 15:18-21: ][SCJ]ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”[SCJ.] ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: