ಯೋಹಾನನು 17 : 1 (IRVKN)
ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು ಯೇಸು ಈ ಮಾತುಗಳನ್ನು ಹೇಳಿದ ಮೇಲೆ * ಯೋಹಾ 11:41: ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, † ಯೋಹಾ 12:23; 7:39: ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
ಯೋಹಾನನು 17 : 2 (IRVKN)
ನೀನು ಯಾರಾರನ್ನು ಕೊಟ್ಟಿದ್ದೀಯೋ‡ ಯೋಹಾ 10:28: ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
ಯೋಹಾನನು 17 : 3 (IRVKN)
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.
ಯೋಹಾನನು 17 : 4 (IRVKN)
ನೀನು ನನಗೆ ಕೊಟ್ಟ ಕೆಲಸವನ್ನು ನಾನು[§ ಯೋಹಾ 19: 30 ]ನೆರವೇರಿಸಿ * ಯೋಹಾ 13:31: ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
ಯೋಹಾನನು 17 : 5 (IRVKN)
ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,† ಯೋಹಾ 1:1,2: ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
ಯೋಹಾನನು 17 : 6 (IRVKN)
“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
ಯೋಹಾನನು 17 : 7 (IRVKN)
ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
ಯೋಹಾನನು 17 : 8 (IRVKN)
ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು‡ ಯೋಹಾ 8:42; 16:27: ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
ಯೋಹಾನನು 17 : 9 (IRVKN)
ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
ಯೋಹಾನನು 17 : 10 (IRVKN)
ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
ಯೋಹಾನನು 17 : 11 (IRVKN)
ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,[§ ಯೋಹಾ 10: 30 ]ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
ಯೋಹಾನನು 17 : 12 (IRVKN)
ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.* ಯೋಹಾ 18:9; 6:39; 10:28; ಕೀರ್ತ 109:8; ಅ. ಕೃ. 1:20: ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಯೋಹಾನನು 17 : 13 (IRVKN)
“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ† ಯೋಹಾ 15:11: ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
ಯೋಹಾನನು 17 : 14 (IRVKN)
ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
ಯೋಹಾನನು 17 : 15 (IRVKN)
ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
ಯೋಹಾನನು 17 : 16 (IRVKN)
ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
ಯೋಹಾನನು 17 : 17 (IRVKN)
ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
ಯೋಹಾನನು 17 : 18 (IRVKN)
‡ ಯೋಹಾ 20:21: ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
ಯೋಹಾನನು 17 : 19 (IRVKN)
ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
ಯೋಹಾನನು 17 : 20 (IRVKN)
ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಯೋಹಾನನು 17 : 21 (IRVKN)
ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ§ 1 ಯೋಹಾ 1:3: ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
ಯೋಹಾನನು 17 : 22 (IRVKN)
ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ಯೋಹಾನನು 17 : 23 (IRVKN)
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
ಯೋಹಾನನು 17 : 24 (IRVKN)
ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,* ಎಫೆ 1:4; 1 ಪೇತ್ರ. 1:20: ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
ಯೋಹಾನನು 17 : 25 (IRVKN)
ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
ಯೋಹಾನನು 17 : 26 (IRVKN)
ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,† ಯೋಹಾ 15:9: ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26