ಯೋಹಾನನು 18 : 1 (IRVKN)
ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಟ್ಟದ್ದು
ಮತ್ತಾ 26:47-56; ಮಾರ್ಕ 14:45-50; ಲೂಕ 22:47-58 ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
ಯೋಹಾನನು 18 : 2 (IRVKN)
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
ಯೋಹಾನನು 18 : 3 (IRVKN)
ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
ಯೋಹಾನನು 18 : 4 (IRVKN)
ಆಗ ಯೇಸು * ಯೋಹಾ 13:1: ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
ಯೋಹಾನನು 18 : 5 (IRVKN)
ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
ಯೋಹಾನನು 18 : 6 (IRVKN)
ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
ಯೋಹಾನನು 18 : 7 (IRVKN)
ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
ಯೋಹಾನನು 18 : 8 (IRVKN)
ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
ಯೋಹಾನನು 18 : 9 (IRVKN)
ಹೀಗೆ † ಯೋಹಾ 17:12: “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
ಯೋಹಾನನು 18 : 10 (IRVKN)
ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
ಯೋಹಾನನು 18 : 11 (IRVKN)
ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು‡ ಕತ್ತಿಯ ಕೋಶ, ಅಥವಾ, ಕತ್ತಿಯನ್ನು ಇಡಲು ಚರ್ಮದಿಂದ ಮಾಡಿದ ಚೀಲ. ಒರೆಯಲ್ಲಿ ಹಾಕು. § ಮತ್ತಾ 20:22; 26:42; ಮಾರ್ಕ 14:36; ಲೂಕ 22:42: ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
ಯೋಹಾನನು 18 : 12 (IRVKN)
ಮಹಾಯಾಜಕನು ಯೇಸುವನ್ನು ವಿಚಾರಿಸಿದ್ದು; ಪೇತ್ರನು ಆತನನ್ನು ನಾನರಿಯೆ ಎಂದು ಹೇಳಿದ್ದು
ಮತ್ತಾ 26:69-75; ಮಾರ್ಕ 14:66-72; ಲೂಕ 22:54-62 ಆಮೇಲೆ ಆ ಸೈನಿಕರ ಗುಂಪು ಮತ್ತು * ಅಥವಾ, ಸೈನ್ಯಾಧಿಕಾರಿ. ಸಹಸ್ರಾಧಿಪತಿಯೂ, ಯೆಹೂದ್ಯರ † ಅಥವಾ, ಕಾವಲಾಳುಗಳೂ. ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
ಯೋಹಾನನು 18 : 13 (IRVKN)
ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
ಯೋಹಾನನು 18 : 14 (IRVKN)
[‡ ಯೋಹಾ 11:5 0 ]ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
ಯೋಹಾನನು 18 : 15 (IRVKN)
ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
ಯೋಹಾನನು 18 : 16 (IRVKN)
ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
ಯೋಹಾನನು 18 : 17 (IRVKN)
ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
ಯೋಹಾನನು 18 : 18 (IRVKN)
ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.
ಯೋಹಾನನು 18 : 19 (IRVKN)
ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
ಯೋಹಾನನು 18 : 20 (IRVKN)
ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
ಯೋಹಾನನು 18 : 21 (IRVKN)
ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
ಯೋಹಾನನು 18 : 22 (IRVKN)
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
ಯೋಹಾನನು 18 : 23 (IRVKN)
ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
ಯೋಹಾನನು 18 : 24 (IRVKN)
§ ಯೋಹಾ 18:13; ಮತ್ತಾ 26:57: ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
ಯೋಹಾನನು 18 : 25 (IRVKN)
ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
ಯೋಹಾನನು 18 : 26 (IRVKN)
ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
ಯೋಹಾನನು 18 : 27 (IRVKN)
ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
ಯೋಹಾನನು 18 : 28 (IRVKN)
ಪಿಲಾತನು ಯೇಸುವನ್ನು ವಿಚಾರಿಸಿ ಆತನಿಗೆ ಮರಣ ದಂಡನೆಯನ್ನು ವಿಧಿಸಿದ್ದು
ಮತ್ತಾ 27:2,11-26; ಮಾರ್ಕ 15:1-15; ಲೂಕ 23:1-25 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ * ಅಥವಾ, ರಾಜ್ಯಪಾಲನ ನಿವಾಸಕ್ಕೆ. ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ † ಅಥವಾ, ಅಶುದ್ಧವಾದ, ಮಡಿಗೆಟ್ಟು. ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
ಯೋಹಾನನು 18 : 29 (IRVKN)
ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
ಯೋಹಾನನು 18 : 30 (IRVKN)
ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
ಯೋಹಾನನು 18 : 31 (IRVKN)
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
ಯೋಹಾನನು 18 : 32 (IRVKN)
‡ ಯೋಹಾ 12:32,33; ಮತ್ತಾ 20:19; 26:2; ಮಾರ್ಕ 10:33; ಲೂಕ 18:32: ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.
ಯೋಹಾನನು 18 : 33 (IRVKN)
ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
ಯೋಹಾನನು 18 : 34 (IRVKN)
ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
ಯೋಹಾನನು 18 : 35 (IRVKN)
ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
ಯೋಹಾನನು 18 : 36 (IRVKN)
ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
ಯೋಹಾನನು 18 : 37 (IRVKN)
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
ಯೋಹಾನನು 18 : 38 (IRVKN)
ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
ಯೋಹಾನನು 18 : 39 (IRVKN)
ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
ಯೋಹಾನನು 18 : 40 (IRVKN)
ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40