ಯೋಹಾನನು 19 : 1 (IRVKN)
[PS]ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
ಯೋಹಾನನು 19 : 2 (IRVKN)
ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,
ಯೋಹಾನನು 19 : 3 (IRVKN)
ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
ಯೋಹಾನನು 19 : 4 (IRVKN)
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
ಯೋಹಾನನು 19 : 5 (IRVKN)
ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
ಯೋಹಾನನು 19 : 6 (IRVKN)
ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
ಯೋಹಾನನು 19 : 7 (IRVKN)
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. [* ಯಾಜ 24:16: ]ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಯೋಹಾನನು 19 : 8 (IRVKN)
ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,
ಯೋಹಾನನು 19 : 9 (IRVKN)
ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
ಯೋಹಾನನು 19 : 10 (IRVKN)
ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
ಯೋಹಾನನು 19 : 11 (IRVKN)
ಅದಕ್ಕೆ ಯೇಸು, [SCJ]“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”[SCJ.] ಎಂದು ಉತ್ತರ ಕೊಟ್ಟನು.
ಯೋಹಾನನು 19 : 12 (IRVKN)
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
ಯೋಹಾನನು 19 : 13 (IRVKN)
ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
ಯೋಹಾನನು 19 : 14 (IRVKN)
ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
ಯೋಹಾನನು 19 : 15 (IRVKN)
ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
ಯೋಹಾನನು 19 : 16 (IRVKN)
ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. [PE]
ಯೋಹಾನನು 19 : 17 (IRVKN)
{#1ಯೇಸುವನ್ನು ಶಿಲುಬೆಗೆ ಹಾಕಿದ್ದೂ, ಹೂಣಿಟ್ಟದ್ದೂ [BR]ಮತ್ತಾ 27:32-50,57-61; ಮಾರ್ಕ 15:21-37,42-47; ಲೂಕ 23:33-46,50-56 } [PS]ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “[† “ತಲೆಬುರುಡೆ” ಇರುವ ಸ್ಥಳ. ]ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
ಯೋಹಾನನು 19 : 18 (IRVKN)
ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
ಯೋಹಾನನು 19 : 19 (IRVKN)
ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
ಯೋಹಾನನು 19 : 20 (IRVKN)
ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
ಯೋಹಾನನು 19 : 21 (IRVKN)
ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ ‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.
ಯೋಹಾನನು 19 : 22 (IRVKN)
ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
ಯೋಹಾನನು 19 : 23 (IRVKN)
ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
ಯೋಹಾನನು 19 : 24 (IRVKN)
ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ [‡ ಕೀರ್ತ 22:18: ]“ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು. [PE]
ಯೋಹಾನನು 19 : 25 (IRVKN)
[PS] [§ ಮತ್ತಾ 27:55, 56; ಮಾರ್ಕ 15:40, 41; ಲೂಕ 23:49: ]ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.
ಯೋಹಾನನು 19 : 26 (IRVKN)
ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, [SCJ]“ಸ್ತ್ರೀಯೇ, ಇಗೋ, ನಿನ್ನ ಮಗನು”[SCJ.] ಎಂದು ಹೇಳಿದನು.
ಯೋಹಾನನು 19 : 27 (IRVKN)
ತರುವಾಯ ಆ ಶಿಷ್ಯನಿಗೆ, [SCJ]“ಇಗೋ, ನಿನ್ನ ತಾಯಿ”[SCJ.] ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. [PE]
ಯೋಹಾನನು 19 : 28 (IRVKN)
[PS]ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, [* ಕೀರ್ತ 69:21: ]ಧರ್ಮಶಾಸ್ತ್ರದ ಮಾತು ನೆರವೇರುವಂತೆ, [SCJ]“ನನಗೆ ನೀರಡಿಕೆಯಾಗಿದೆ”[SCJ.] ಎಂದನು.
ಯೋಹಾನನು 19 : 29 (IRVKN)
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು [† ಹೀರುವ ಪದಾರ್ಥ, ರಂಧ್ರಗಳು ಒಳಗೊಂಡಿರುತ್ತದೆ. ]ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
ಯೋಹಾನನು 19 : 30 (IRVKN)
ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, [SCJ]“ತೀರಿತು”[SCJ.] ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. [PE]
ಯೋಹಾನನು 19 : 31 (IRVKN)
[PS]ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
ಯೋಹಾನನು 19 : 32 (IRVKN)
ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
ಯೋಹಾನನು 19 : 33 (IRVKN)
ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
ಯೋಹಾನನು 19 : 34 (IRVKN)
ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. [‡ 1 ಯೋಹಾ 5:6, 8: ]ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
ಯೋಹಾನನು 19 : 35 (IRVKN)
ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
ಯೋಹಾನನು 19 : 36 (IRVKN)
ಏಕೆಂದರೆ “ಆತನ [§ ವಿಮೋ 12:46; ಕೀರ್ತ 34:20: ]ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
ಯೋಹಾನನು 19 : 37 (IRVKN)
[* ಜೆಕ. 12:10: ]“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. [PE]
ಯೋಹಾನನು 19 : 38 (IRVKN)
[PS]ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
ಯೋಹಾನನು 19 : 39 (IRVKN)
ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ [† ಯೋಹಾ 3:1, 2; 7:50. ]ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ [‡ ಸುಗಂಧದ್ರವ್ಯ. ]ಚೂರ್ಣವನ್ನು [§ ಮೂವತ್ತು ಕಿಲೋ ಗ್ರಾಮಿನಷ್ಟು. ]ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
ಯೋಹಾನನು 19 : 40 (IRVKN)
ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
ಯೋಹಾನನು 19 : 41 (IRVKN)
ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
ಯೋಹಾನನು 19 : 42 (IRVKN)
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು. [PE]
❮
❯