ಯೋಹಾನನು 2 : 1 (IRVKN)
{ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ} [PS] ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
ಯೋಹಾನನು 2 : 2 (IRVKN)
ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
ಯೋಹಾನನು 2 : 3 (IRVKN)
ಅಲ್ಲಿ ದ್ರಾಕ್ಷಾರಸವು [* ಅಥವಾ, ಮುಗಿದುಹೋದಾಗ, ಕಡಿಮೆ ಆಗಿರುವಾಗ. ] ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
ಯೋಹಾನನು 2 : 4 (IRVKN)
ಯೇಸು ಆಕೆಗೆ [† ಮೂಲ: ಸ್ತ್ರೀ ಎಂದು. ] “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
ಯೋಹಾನನು 2 : 5 (IRVKN)
ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
ಯೋಹಾನನು 2 : 6 (IRVKN)
ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು [‡ ಒಂದು ಅಳತೆ, ಸುಮಾರು 40 ಲೀಟರ್ ದ್ರವ ಹಿಡಿಯುವ ಪಾತ್ರೆ. ] ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
ಯೋಹಾನನು 2 : 7 (IRVKN)
ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
ಯೋಹಾನನು 2 : 8 (IRVKN)
ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
ಯೋಹಾನನು 2 : 9 (IRVKN)
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
ಯೋಹಾನನು 2 : 10 (IRVKN)
“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
ಯೋಹಾನನು 2 : 11 (IRVKN)
ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು. [PS]
ಯೋಹಾನನು 2 : 12 (IRVKN)
{ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು} [PS] ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು. [PE][PS]
ಯೋಹಾನನು 2 : 13 (IRVKN)
ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
ಯೋಹಾನನು 2 : 14 (IRVKN)
ಆತನು [§ ಮತ್ತಾ 21:12,13; ಮಾರ್ಕ 11:15-17; ಲೂಕ 19:45,46:] ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
ಯೋಹಾನನು 2 : 15 (IRVKN)
ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
ಯೋಹಾನನು 2 : 16 (IRVKN)
ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
ಯೋಹಾನನು 2 : 17 (IRVKN)
ಆಗ [* ಕೀರ್ತ 69:9:] “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
ಯೋಹಾನನು 2 : 18 (IRVKN)
ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
ಯೋಹಾನನು 2 : 19 (IRVKN)
ಅದಕ್ಕೆ ಯೇಸು [† ಮತ್ತಾ 26:61:] “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
ಯೋಹಾನನು 2 : 20 (IRVKN)
ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
ಯೋಹಾನನು 2 : 21 (IRVKN)
ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
ಯೋಹಾನನು 2 : 22 (IRVKN)
ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. [PS]
ಯೋಹಾನನು 2 : 23 (IRVKN)
{ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು} [PS] ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಯೋಹಾನನು 2 : 24 (IRVKN)
ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
ಯೋಹಾನನು 2 : 25 (IRVKN)
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: