ಯೋಹಾನನು 3 : 1 (IRVKN)
{ಹೊಸದಾಗಿ ಹುಟ್ಟುವುದು} [PS] ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
ಯೋಹಾನನು 3 : 2 (IRVKN)
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
ಯೋಹಾನನು 3 : 3 (IRVKN)
ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು [* ಅಥವಾ, ಮೇಲಿನಿಂದ. ] ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
ಯೋಹಾನನು 3 : 4 (IRVKN)
ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
ಯೋಹಾನನು 3 : 5 (IRVKN)
ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
ಯೋಹಾನನು 3 : 6 (IRVKN)
ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
ಯೋಹಾನನು 3 : 7 (IRVKN)
‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
ಯೋಹಾನನು 3 : 8 (IRVKN)
ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. [PE][PS]
ಯೋಹಾನನು 3 : 9 (IRVKN)
ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
ಯೋಹಾನನು 3 : 10 (IRVKN)
ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
ಯೋಹಾನನು 3 : 11 (IRVKN)
ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
ಯೋಹಾನನು 3 : 12 (IRVKN)
ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
ಯೋಹಾನನು 3 : 13 (IRVKN)
[† ಜ್ಞಾ. 30. 4; 1 ಕೊರಿ 15:47; ಎಫೆ 4:9:] ಪರಲೋಕದಿಂದ ಇಳಿದು ಬಂದವನೇ, ಅಂದರೆ, [‡ ಕೆಲವು ಪ್ರತಿಗಳಲ್ಲಿ, ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಎಂದು ಬರೆದದೆ. ] ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
ಯೋಹಾನನು 3 : 14 (IRVKN)
ಇದಲ್ಲದೆ [§ ಅರಣ್ಯ 21:8,9.] ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
ಯೋಹಾನನು 3 : 15 (IRVKN)
ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. [PE][PS]
ಯೋಹಾನನು 3 : 16 (IRVKN)
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಯೋಹಾನನು 3 : 17 (IRVKN)
ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
ಯೋಹಾನನು 3 : 18 (IRVKN)
ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಯೋಹಾನನು 3 : 19 (IRVKN)
ಆ ತೀರ್ಪು ಏನೆಂದರೆ [* ಯೋಹಾ 1:4, 5; ಎಫೆ 5:8:] ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
ಯೋಹಾನನು 3 : 20 (IRVKN)
ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
ಯೋಹಾನನು 3 : 21 (IRVKN)
ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.” [PS]
ಯೋಹಾನನು 3 : 22 (IRVKN)
{ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು} [PS] ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, [† ಯೋಹಾ 4:1, 2:] ದೀಕ್ಷಾಸ್ನಾನ ಕೊಡುತ್ತಿದ್ದನು.
ಯೋಹಾನನು 3 : 23 (IRVKN)
ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
ಯೋಹಾನನು 3 : 24 (IRVKN)
ಆಗ ಇನ್ನೂ [‡ ಮತ್ತಾ 4:12:] ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
ಯೋಹಾನನು 3 : 25 (IRVKN)
ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
ಯೋಹಾನನು 3 : 26 (IRVKN)
ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
ಯೋಹಾನನು 3 : 27 (IRVKN)
ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
ಯೋಹಾನನು 3 : 28 (IRVKN)
[§ ಯೋಹಾ 1:20, 33; ಮತ್ತಾ 3:3,11.] ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
ಯೋಹಾನನು 3 : 29 (IRVKN)
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
ಯೋಹಾನನು 3 : 30 (IRVKN)
ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
ಯೋಹಾನನು 3 : 31 (IRVKN)
[* ರೋಮಾ. 9:5; 1 ಕೊರಿ 15:47:] ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
ಯೋಹಾನನು 3 : 32 (IRVKN)
ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
ಯೋಹಾನನು 3 : 33 (IRVKN)
ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
ಯೋಹಾನನು 3 : 34 (IRVKN)
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
ಯೋಹಾನನು 3 : 35 (IRVKN)
ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
ಯೋಹಾನನು 3 : 36 (IRVKN)
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: