ಯೋಹಾನನು 4 : 1 (IRVKN)
ಯೇಸು ಸಮಾರ್ಯ ಸ್ತ್ರೀಯ ಸಂಗಡ ಸಂಭಾಷಣೆ ಮಾಡಿದ್ದು ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
ಯೋಹಾನನು 4 : 2 (IRVKN)
(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),
ಯೋಹಾನನು 4 : 3 (IRVKN)
ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.
ಯೋಹಾನನು 4 : 4 (IRVKN)
ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
ಯೋಹಾನನು 4 : 5 (IRVKN)
ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. * ಯೋಹಾ 4:12; ಆದಿ 33:19; 48:22; ಯೆಹೋ. 24:32: ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.
ಯೋಹಾನನು 4 : 6 (IRVKN)
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮೂಲ: ಆರು ತಾಸಾಗಿತ್ತು. ಮಧ್ಯಾಹ್ನವಾಗಿತ್ತು.
ಯೋಹಾನನು 4 : 7 (IRVKN)
ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.
ಯೋಹಾನನು 4 : 8 (IRVKN)
ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.
ಯೋಹಾನನು 4 : 9 (IRVKN)
ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಮತ್ತಾ 10:5; ಲೂಕ 9:53: ಯೆಹೂದ್ಯರಿಗೂ ಸಮಾರ್ಯದವರಿಗೂ § ಅಥವಾ ವ್ಯವಹಾರಗಳು. ಹೊಕ್ಕುಬಳಕೆ ಇರಲಿಲ್ಲ.
ಯೋಹಾನನು 4 : 10 (IRVKN)
ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
ಯೋಹಾನನು 4 : 11 (IRVKN)
ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
ಯೋಹಾನನು 4 : 12 (IRVKN)
ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
ಯೋಹಾನನು 4 : 13 (IRVKN)
ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
ಯೋಹಾನನು 4 : 14 (IRVKN)
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು* ಯೋಹಾ 7:38: ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
ಯೋಹಾನನು 4 : 15 (IRVKN)
ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
ಯೋಹಾನನು 4 : 16 (IRVKN)
ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
ಯೋಹಾನನು 4 : 17 (IRVKN)
ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
ಯೋಹಾನನು 4 : 18 (IRVKN)
ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
ಯೋಹಾನನು 4 : 19 (IRVKN)
ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
ಯೋಹಾನನು 4 : 20 (IRVKN)
ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
ಯೋಹಾನನು 4 : 21 (IRVKN)
ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
ಯೋಹಾನನು 4 : 22 (IRVKN)
ಸಮಾರ್ಯದವರಾದ 2 ಅರಸು. 7:28-34: ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
ಯೋಹಾನನು 4 : 23 (IRVKN)
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
ಯೋಹಾನನು 4 : 24 (IRVKN)
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಕೀರ್ತ 145:18; ಫಿಲಿ. 3:3: ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
ಯೋಹಾನನು 4 : 25 (IRVKN)
ಆ ಹೆಂಗಸು ಆತನಿಗೆ § ಯೋಹಾ 1:41, 45; ಧರ್ಮೋ 18:18: “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
ಯೋಹಾನನು 4 : 26 (IRVKN)
ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
ಯೋಹಾನನು 4 : 27 (IRVKN)
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
ಯೋಹಾನನು 4 : 28 (IRVKN)
ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
ಯೋಹಾನನು 4 : 29 (IRVKN)
* ಯೋಹಾ 1:41, 45; ಧರ್ಮೋ 18:18: “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
ಯೋಹಾನನು 4 : 30 (IRVKN)
ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
ಯೋಹಾನನು 4 : 31 (IRVKN)
ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.
ಯೋಹಾನನು 4 : 32 (IRVKN)
ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು
ಯೋಹಾನನು 4 : 33 (IRVKN)
ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಯೋಹಾನನು 4 : 34 (IRVKN)
ಯೇಸು ಅವರಿಗೆ ಯೋಹಾ 5:30, 36; 6, 38; 17:4; ಯೋಬ. 23:12: “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
ಯೋಹಾನನು 4 : 35 (IRVKN)
‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
ಯೋಹಾನನು 4 : 36 (IRVKN)
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
ಯೋಹಾನನು 4 : 37 (IRVKN)
‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
ಯೋಹಾನನು 4 : 38 (IRVKN)
ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
ಯೋಹಾನನು 4 : 39 (IRVKN)
“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
ಯೋಹಾನನು 4 : 40 (IRVKN)
ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
ಯೋಹಾನನು 4 : 41 (IRVKN)
ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,
ಯೋಹಾನನು 4 : 42 (IRVKN)
ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
ಯೋಹಾನನು 4 : 43 (IRVKN)
ಯೇಸು ಒಬ್ಬ ಅಧಿಕಾರಿಯ ಮಗನನ್ನು ಸ್ವಸ್ಥಮಾಡಿದ್ದು ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
ಯೋಹಾನನು 4 : 44 (IRVKN)
ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
ಯೋಹಾನನು 4 : 45 (IRVKN)
ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
ಯೋಹಾನನು 4 : 46 (IRVKN)
ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
ಯೋಹಾನನು 4 : 47 (IRVKN)
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
ಯೋಹಾನನು 4 : 48 (IRVKN)
ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
ಯೋಹಾನನು 4 : 49 (IRVKN)
ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
ಯೋಹಾನನು 4 : 50 (IRVKN)
ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
ಯೋಹಾನನು 4 : 51 (IRVKN)
ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
ಯೋಹಾನನು 4 : 52 (IRVKN)
ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
ಯೋಹಾನನು 4 : 53 (IRVKN)
ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
ಯೋಹಾನನು 4 : 54 (IRVKN)
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54