ಯೋಹಾನನು 5 : 1 (IRVKN)
{ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು} [PS] ಇದಾದ ಮೇಲೆ ಯೆಹೂದ್ಯರ ಒಂದು [* ಅಥವಾ, ಹಬ್ಬ. ] ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.
ಯೋಹಾನನು 5 : 2 (IRVKN)
ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ [† ಕೆಲವು ಪ್ರತಿಗಳಲ್ಲಿ ಬೇತ್ಸಾಯಿದವೆಂದು, ಬೇರೆ ಕೆಲವು ಪ್ರತಿಗಳಲ್ಲಿ ಬೇಥೆಸ್ಥ ಎಂದು ಬರೆದಿದೆ. ] ಬೇತ್ಸಥಾ ಎಂದು ಕರೆಯುತ್ತಾರೆ.
ಯೋಹಾನನು 5 : 3 (IRVKN)
[3-4] ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. [‡ ಕೆಲವು ಪ್ರತಿಗಳಲ್ಲಿ ಈ ಭಾಗವು ಕಂಡುಬರುವುದಿಲ್ಲ] (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
ಯೋಹಾನನು 5 : 4 (IRVKN)
[NIL]
ಯೋಹಾನನು 5 : 5 (IRVKN)
ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
ಯೋಹಾನನು 5 : 6 (IRVKN)
ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
ಯೋಹಾನನು 5 : 7 (IRVKN)
ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
ಯೋಹಾನನು 5 : 8 (IRVKN)
ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.
ಯೋಹಾನನು 5 : 9 (IRVKN)
ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು, [PE][PS]
ಯೋಹಾನನು 5 : 10 (IRVKN)
ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
ಯೋಹಾನನು 5 : 11 (IRVKN)
ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.
ಯೋಹಾನನು 5 : 12 (IRVKN)
ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
ಯೋಹಾನನು 5 : 13 (IRVKN)
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
ಯೋಹಾನನು 5 : 14 (IRVKN)
ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; [§ ಯೋಹಾ 8:11:] ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
ಯೋಹಾನನು 5 : 15 (IRVKN)
ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
ಯೋಹಾನನು 5 : 16 (IRVKN)
ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
ಯೋಹಾನನು 5 : 17 (IRVKN)
ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
ಯೋಹಾನನು 5 : 18 (IRVKN)
ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. [PS]
ಯೋಹಾನನು 5 : 19 (IRVKN)
{ದೇವಕುಮಾರನ ಅಧಿಕಾರವನ್ನು ಮತ್ತು ಆತನಿಗಿರುವ ಸಾಕ್ಷಿಯನ್ನು ಕುರಿತು ಯೇಸು ಮಾಡಿದ ಉಪದೇಶ} [PS] ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
ಯೋಹಾನನು 5 : 20 (IRVKN)
ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
ಯೋಹಾನನು 5 : 21 (IRVKN)
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.
ಯೋಹಾನನು 5 : 22 (IRVKN)
ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.
ಯೋಹಾನನು 5 : 23 (IRVKN)
ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
ಯೋಹಾನನು 5 : 24 (IRVKN)
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
ಯೋಹಾನನು 5 : 25 (IRVKN)
ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
ಯೋಹಾನನು 5 : 26 (IRVKN)
ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.
ಯೋಹಾನನು 5 : 27 (IRVKN)
ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.
ಯೋಹಾನನು 5 : 28 (IRVKN)
ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ [* ದಾನಿ. 12:2; ಪ್ರಕ 20:4,5,12,13:] ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
ಯೋಹಾನನು 5 : 29 (IRVKN)
ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. [PE][PS]
ಯೋಹಾನನು 5 : 30 (IRVKN)
“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
ಯೋಹಾನನು 5 : 31 (IRVKN)
ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
ಯೋಹಾನನು 5 : 32 (IRVKN)
ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
ಯೋಹಾನನು 5 : 33 (IRVKN)
ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
ಯೋಹಾನನು 5 : 34 (IRVKN)
ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
ಯೋಹಾನನು 5 : 35 (IRVKN)
ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
ಯೋಹಾನನು 5 : 36 (IRVKN)
ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಯೋಹಾನನು 5 : 37 (IRVKN)
ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
ಯೋಹಾನನು 5 : 38 (IRVKN)
ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.
ಯೋಹಾನನು 5 : 39 (IRVKN)
[† ಲೂಕ 24:27, 44-47; ಅ. ಕೃ. 17:11:] ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.
ಯೋಹಾನನು 5 : 40 (IRVKN)
ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ. [PE][PS]
ಯೋಹಾನನು 5 : 41 (IRVKN)
“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,
ಯೋಹಾನನು 5 : 42 (IRVKN)
ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.
ಯೋಹಾನನು 5 : 43 (IRVKN)
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.
ಯೋಹಾನನು 5 : 44 (IRVKN)
ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
ಯೋಹಾನನು 5 : 45 (IRVKN)
ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
ಯೋಹಾನನು 5 : 46 (IRVKN)
ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.
ಯೋಹಾನನು 5 : 47 (IRVKN)
ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47

BG:

Opacity:

Color:


Size:


Font: