ಯೋಹಾನನು 6 : 1 (IRVKN)
{ಯೇಸು ಐದು ಸಾವಿರ ಜನರಿಗೆ ಊಟ ಕೊಟ್ಟಿದು} (ಮತ್ತಾ 14:13-21; ಮಾರ್ಕ 6:30-44; ಲೂಕ 9:10-17) [PS] ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
ಯೋಹಾನನು 6 : 2 (IRVKN)
ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
ಯೋಹಾನನು 6 : 3 (IRVKN)
ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
ಯೋಹಾನನು 6 : 4 (IRVKN)
ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
ಯೋಹಾನನು 6 : 5 (IRVKN)
ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
ಯೋಹಾನನು 6 : 6 (IRVKN)
ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
ಯೋಹಾನನು 6 : 7 (IRVKN)
ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು [* ಅಂದು ಒಂದು ದಿನಾರಿ ಎಂದರೆ ಒಂದು ದಿನದ ಕೂಲಿ.] ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
ಯೋಹಾನನು 6 : 8 (IRVKN)
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
ಯೋಹಾನನು 6 : 9 (IRVKN)
“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
ಯೋಹಾನನು 6 : 10 (IRVKN)
ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
ಯೋಹಾನನು 6 : 11 (IRVKN)
ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
ಯೋಹಾನನು 6 : 12 (IRVKN)
ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
ಯೋಹಾನನು 6 : 13 (IRVKN)
ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
ಯೋಹಾನನು 6 : 14 (IRVKN)
ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ [† ಧರ್ಮೋ 18:15-22:] ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
ಯೋಹಾನನು 6 : 15 (IRVKN)
ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು. ನೀರಿನ ಮೇಲೆ ನಡೆದದ್ದು; (ಮತ್ತಾ 14:22-33; ಮಾರ್ಕ 6:45-52) [PS]
ಯೋಹಾನನು 6 : 16 (IRVKN)
ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
ಯೋಹಾನನು 6 : 17 (IRVKN)
ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
ಯೋಹಾನನು 6 : 18 (IRVKN)
ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
ಯೋಹಾನನು 6 : 19 (IRVKN)
ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು [‡ ಮೂಲ: ಇಪ್ಪತ್ತೈದು ಮೂವತ್ತು ಸ್ತಾದ್ಯಗಳು. ಅಥವಾ, ಐದು-ಆರು ಕಿಲೋಮೀಟರಗಳು. ] ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
ಯೋಹಾನನು 6 : 20 (IRVKN)
ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
ಯೋಹಾನನು 6 : 21 (IRVKN)
ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. [PS]
ಯೋಹಾನನು 6 : 22 (IRVKN)
{ಯೇಸು ತಾನೇ ಜೀವಕರವಾದ ರೊಟ್ಟಿ ಎಂದದ್ದು} [PS] ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
ಯೋಹಾನನು 6 : 23 (IRVKN)
ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
ಯೋಹಾನನು 6 : 24 (IRVKN)
ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
ಯೋಹಾನನು 6 : 25 (IRVKN)
ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
ಯೋಹಾನನು 6 : 26 (IRVKN)
ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
ಯೋಹಾನನು 6 : 27 (IRVKN)
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. [PE][PS]
ಯೋಹಾನನು 6 : 28 (IRVKN)
ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
ಯೋಹಾನನು 6 : 29 (IRVKN)
ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
ಯೋಹಾನನು 6 : 30 (IRVKN)
ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
ಯೋಹಾನನು 6 : 31 (IRVKN)
ನಮ್ಮ [§ ವಿಮೋ 16:4,15:] ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. [* ನೆಹೆ 9:15; ಕೀರ್ತ 78:24:] ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
ಯೋಹಾನನು 6 : 32 (IRVKN)
ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
ಯೋಹಾನನು 6 : 33 (IRVKN)
ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
ಯೋಹಾನನು 6 : 34 (IRVKN)
ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
ಯೋಹಾನನು 6 : 35 (IRVKN)
ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ [† ಅಥವಾ, ನೀರಡಿಕೆಯಾಗುವುದಿಲ್ಲ. ] ಬಾಯಾರಿಕೆಯಾಗುವುದಿಲ್ಲ.
ಯೋಹಾನನು 6 : 36 (IRVKN)
ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
ಯೋಹಾನನು 6 : 37 (IRVKN)
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
ಯೋಹಾನನು 6 : 38 (IRVKN)
ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
ಯೋಹಾನನು 6 : 39 (IRVKN)
ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ [‡ ಯೋಹಾ 6:40,44,54; 11:25:] ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
ಯೋಹಾನನು 6 : 40 (IRVKN)
ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. [PE][PS]
ಯೋಹಾನನು 6 : 41 (IRVKN)
ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
ಯೋಹಾನನು 6 : 42 (IRVKN)
“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
ಯೋಹಾನನು 6 : 43 (IRVKN)
ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.
ಯೋಹಾನನು 6 : 44 (IRVKN)
“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
ಯೋಹಾನನು 6 : 45 (IRVKN)
[§ ಯೆಶಾ 54:13:] ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
ಯೋಹಾನನು 6 : 46 (IRVKN)
ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
ಯೋಹಾನನು 6 : 47 (IRVKN)
ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.
ಯೋಹಾನನು 6 : 48 (IRVKN)
ನಾನೇ ಜೀವದ ರೊಟ್ಟಿ
ಯೋಹಾನನು 6 : 49 (IRVKN)
ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
ಯೋಹಾನನು 6 : 50 (IRVKN)
ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
ಯೋಹಾನನು 6 : 51 (IRVKN)
ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. [PE][PS]
ಯೋಹಾನನು 6 : 52 (IRVKN)
ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
ಯೋಹಾನನು 6 : 53 (IRVKN)
ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
ಯೋಹಾನನು 6 : 54 (IRVKN)
ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
ಯೋಹಾನನು 6 : 55 (IRVKN)
ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
ಯೋಹಾನನು 6 : 56 (IRVKN)
ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
ಯೋಹಾನನು 6 : 57 (IRVKN)
ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
ಯೋಹಾನನು 6 : 58 (IRVKN)
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.
ಯೋಹಾನನು 6 : 59 (IRVKN)
ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು. [PE][PS]
ಯೋಹಾನನು 6 : 60 (IRVKN)
ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
ಯೋಹಾನನು 6 : 61 (IRVKN)
ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
ಯೋಹಾನನು 6 : 62 (IRVKN)
ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
ಯೋಹಾನನು 6 : 63 (IRVKN)
ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
ಯೋಹಾನನು 6 : 64 (IRVKN)
ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
ಯೋಹಾನನು 6 : 65 (IRVKN)
ಆತನು [* ಯೋಹಾ 6:44:] “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. [PE][PS]
ಯೋಹಾನನು 6 : 66 (IRVKN)
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
ಯೋಹಾನನು 6 : 67 (IRVKN)
ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
ಯೋಹಾನನು 6 : 68 (IRVKN)
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
ಯೋಹಾನನು 6 : 69 (IRVKN)
ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
ಯೋಹಾನನು 6 : 70 (IRVKN)
ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
ಯೋಹಾನನು 6 : 71 (IRVKN)
ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71

BG:

Opacity:

Color:


Size:


Font: