ಯೋಹಾನನು 7 : 1 (IRVKN)
ಗುಡಾರಗಳ ಹಬ್ಬದಲ್ಲಿ ಯೇಸುವಿನ ಉಪದೇಶ ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
ಯೋಹಾನನು 7 : 2 (IRVKN)
ಆಗ ಯೆಹೂದ್ಯರ * ಯಾಜ 23, 34; ನೆಹೆ 8, 14, 15: ಗುಡಾರಗಳ ಹಬ್ಬವು ಸಮೀಪವಾಗಿತ್ತು,
ಯೋಹಾನನು 7 : 3 (IRVKN)
ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
ಯೋಹಾನನು 7 : 4 (IRVKN)
ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
ಯೋಹಾನನು 7 : 5 (IRVKN)
ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
ಯೋಹಾನನು 7 : 6 (IRVKN)
ಅದಕ್ಕೆ ಯೇಸು ಅವರಿಗೆ, [† ಯೋಹಾ 7:8, 30 ]“ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಯೋಹಾನನು 7 : 7 (IRVKN)
ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
ಯೋಹಾನನು 7 : 8 (IRVKN)
ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
ಯೋಹಾನನು 7 : 9 (IRVKN)
ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
ಯೋಹಾನನು 7 : 10 (IRVKN)
ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
ಯೋಹಾನನು 7 : 11 (IRVKN)
ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
ಯೋಹಾನನು 7 : 12 (IRVKN)
ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
ಯೋಹಾನನು 7 : 13 (IRVKN)
ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
ಯೋಹಾನನು 7 : 14 (IRVKN)
ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
ಯೋಹಾನನು 7 : 15 (IRVKN)
ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
ಯೋಹಾನನು 7 : 16 (IRVKN)
ಅದಕ್ಕೆ ಯೇಸು ಯೋಹಾ 3:34; 8:28; 12:49; 14:10, 24: “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
ಯೋಹಾನನು 7 : 17 (IRVKN)
ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
ಯೋಹಾನನು 7 : 18 (IRVKN)
ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
ಯೋಹಾನನು 7 : 19 (IRVKN)
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
ಯೋಹಾನನು 7 : 20 (IRVKN)
ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
ಯೋಹಾನನು 7 : 21 (IRVKN)
ಯೇಸು ಅವರಿಗೆ “ನಾನು§ ಯೋಹಾ 5:1-9: ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
ಯೋಹಾನನು 7 : 22 (IRVKN)
* ಯಾಜ 12:3: ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಆದಿ 17:10: ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
ಯೋಹಾನನು 7 : 23 (IRVKN)
ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
ಯೋಹಾನನು 7 : 24 (IRVKN)
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.
ಯೋಹಾನನು 7 : 25 (IRVKN)
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
ಯೋಹಾನನು 7 : 26 (IRVKN)
ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
ಯೋಹಾನನು 7 : 27 (IRVKN)
ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
ಯೋಹಾನನು 7 : 28 (IRVKN)
ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
ಯೋಹಾನನು 7 : 29 (IRVKN)
ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
ಯೋಹಾನನು 7 : 30 (IRVKN)
ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
ಯೋಹಾನನು 7 : 31 (IRVKN)
ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
ಯೋಹಾನನು 7 : 32 (IRVKN)
ಅಧಿಕಾರಿಗಳು ಆತನನ್ನು ಹಿಡಿಯುವುದಕ್ಕೆ ಪ್ರಯತ್ನಮಾಡಿದ್ದು ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
ಯೋಹಾನನು 7 : 33 (IRVKN)
ಆಗ ಯೇಸು ಅವರಿಗೆ ಯೋಹಾ 12:35; 16, 5, 16: “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
ಯೋಹಾನನು 7 : 34 (IRVKN)
§ ಯೋಹಾ 8:21: ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
ಯೋಹಾನನು 7 : 35 (IRVKN)
ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
ಯೋಹಾನನು 7 : 36 (IRVKN)
‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
ಯೋಹಾನನು 7 : 37 (IRVKN)
ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು * ಯೆಶಾ 55:1; ಯೋಹಾ 4:14; 6:35: “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಯೋಹಾನನು 7 : 38 (IRVKN)
ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
ಯೋಹಾನನು 7 : 39 (IRVKN)
ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
ಯೋಹಾನನು 7 : 40 (IRVKN)
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
ಯೋಹಾನನು 7 : 41 (IRVKN)
ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
ಯೋಹಾನನು 7 : 42 (IRVKN)
ಯೆರೆ 23:5; ಮೀಕ. 5:2: ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
ಯೋಹಾನನು 7 : 43 (IRVKN)
ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
ಯೋಹಾನನು 7 : 44 (IRVKN)
ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
ಯೋಹಾನನು 7 : 45 (IRVKN)
ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
ಯೋಹಾನನು 7 : 46 (IRVKN)
ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
ಯೋಹಾನನು 7 : 47 (IRVKN)
ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
ಯೋಹಾನನು 7 : 48 (IRVKN)
ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
ಯೋಹಾನನು 7 : 49 (IRVKN)
ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
ಯೋಹಾನನು 7 : 50 (IRVKN)
ಮೊದಲು ಯೇಸುವಿನ ಬಳಿಗೆ ಬಂದಿದ್ದ ಯೋಹಾ 3:1; 19:39: ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,
ಯೋಹಾನನು 7 : 51 (IRVKN)
ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
ಯೋಹಾನನು 7 : 52 (IRVKN)
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
ಯೋಹಾನನು 7 : 53 (IRVKN)
§ ಈ ವಚನವು ಕೆಲವು ಪ್ರತಿಗಳಲ್ಲಿ ಮಾತ್ರ ಲಭ್ಯ ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53