ಯೋಹಾನನು 9 : 1 (IRVKN)
ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ಯೋಹಾನನು 9 : 2 (IRVKN)
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
ಯೋಹಾನನು 9 : 3 (IRVKN)
ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
ಯೋಹಾನನು 9 : 4 (IRVKN)
* ಯೋಹಾ 4:34; 11:9; 12:35; ರೋಮಾ. 13:12: ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
ಯೋಹಾನನು 9 : 5 (IRVKN)
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
ಯೋಹಾನನು 9 : 6 (IRVKN)
ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
ಯೋಹಾನನು 9 : 7 (IRVKN)
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ಯೋಹಾನನು 9 : 8 (IRVKN)
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
ಯೋಹಾನನು 9 : 9 (IRVKN)
ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
ಯೋಹಾನನು 9 : 10 (IRVKN)
ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
ಯೋಹಾನನು 9 : 11 (IRVKN)
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
ಯೋಹಾನನು 9 : 12 (IRVKN)
ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
ಯೋಹಾನನು 9 : 13 (IRVKN)
ಫರಿಸಾಯರು ಆ ಕುರುಡನನ್ನು ಬಹಿಷ್ಕರಿಸಿದ್ದು ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
ಯೋಹಾನನು 9 : 14 (IRVKN)
ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
ಯೋಹಾನನು 9 : 15 (IRVKN)
ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
ಯೋಹಾನನು 9 : 16 (IRVKN)
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
ಯೋಹಾನನು 9 : 17 (IRVKN)
ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
ಯೋಹಾನನು 9 : 18 (IRVKN)
ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
ಯೋಹಾನನು 9 : 19 (IRVKN)
ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
ಯೋಹಾನನು 9 : 20 (IRVKN)
ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
ಯೋಹಾನನು 9 : 21 (IRVKN)
ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
ಯೋಹಾನನು 9 : 22 (IRVKN)
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯೋಹಾ 12:42; 16:2: ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
ಯೋಹಾನನು 9 : 23 (IRVKN)
“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
ಯೋಹಾನನು 9 : 24 (IRVKN)
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
ಯೋಹಾನನು 9 : 25 (IRVKN)
ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
ಯೋಹಾನನು 9 : 26 (IRVKN)
ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
ಯೋಹಾನನು 9 : 27 (IRVKN)
ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
ಯೋಹಾನನು 9 : 28 (IRVKN)
ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
ಯೋಹಾನನು 9 : 29 (IRVKN)
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
ಯೋಹಾನನು 9 : 30 (IRVKN)
ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
ಯೋಹಾನನು 9 : 31 (IRVKN)
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
ಯೋಹಾನನು 9 : 32 (IRVKN)
ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
ಯೋಹಾನನು 9 : 33 (IRVKN)
ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
ಯೋಹಾನನು 9 : 34 (IRVKN)
ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಯೋಹಾನನು 9 : 35 (IRVKN)
ಆತ್ಮೀಕ ಕುರುಡುತನ ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಕೆಲವು ಪ್ರತಿಗಳಲ್ಲಿ, ದೇವಕುಮಾರನೆಂದು ಬರೆದದೆ. ಯೋಹಾ 10:36; ಮತ್ತಾ 14:33: ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
ಯೋಹಾನನು 9 : 36 (IRVKN)
ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
ಯೋಹಾನನು 9 : 37 (IRVKN)
ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
ಯೋಹಾನನು 9 : 38 (IRVKN)
ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
ಯೋಹಾನನು 9 : 39 (IRVKN)
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
ಯೋಹಾನನು 9 : 40 (IRVKN)
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
ಯೋಹಾನನು 9 : 41 (IRVKN)
ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41