ಯೋನ 2 : 1 (IRVKN)
ಯೋನನ ಪ್ರಾರ್ಥನೆ
ಯೋನ 2 : 2 (IRVKN)
ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
ಯೋನ 2 : 3 (IRVKN)
ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
ಯೋನ 2 : 4 (IRVKN)
‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
ಯೋನ 2 : 5 (IRVKN)
ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
ಯೋನ 2 : 6 (IRVKN)
ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
ಯೋನ 2 : 7 (IRVKN)
“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
ಯೋನ 2 : 8 (IRVKN)
“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
ಯೋನ 2 : 9 (IRVKN)
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
ಯೋನ 2 : 10 (IRVKN)
ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

1 2 3 4 5 6 7 8 9 10