ಯೋನ 3 : 1 (IRVKN)
ಯೋನನ ವಿಧೇಯತೆಯೂ ನಿನೆವೆಯರ ಮನಃಪರಿವರ್ತನೆಯೂ ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
ಯೋನ 3 : 2 (IRVKN)
ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.
ಯೋನ 3 : 3 (IRVKN)
ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
ಯೋನ 3 : 4 (IRVKN)
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ಯೋನ 3 : 5 (IRVKN)
ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
ಯೋನ 3 : 6 (IRVKN)
ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
ಯೋನ 3 : 7 (IRVKN)
ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
ಯೋನ 3 : 8 (IRVKN)
ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
ಯೋನ 3 : 9 (IRVKN)
ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
ಯೋನ 3 : 10 (IRVKN)
ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

1 2 3 4 5 6 7 8 9 10