ಯೆಹೋಶುವ 1 : 1 (IRVKN)
{ಹೊಳೆದಾಟುವುದಕ್ಕೆ ಸಿದ್ಧರಾಗಬೇಕೆಂಬ ಅಪ್ಪಣೆ} [PS] ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
ಯೆಹೋಶುವ 1 : 2 (IRVKN)
“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
ಯೆಹೋಶುವ 1 : 3 (IRVKN)
ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.
ಯೆಹೋಶುವ 1 : 4 (IRVKN)
ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ [* ಮೆಡಿಟೇರಿಯನ್ ಸಮುದ್ರ.] ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
ಯೆಹೋಶುವ 1 : 5 (IRVKN)
ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
ಯೆಹೋಶುವ 1 : 6 (IRVKN)
ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
ಯೆಹೋಶುವ 1 : 7 (IRVKN)
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
ಯೆಹೋಶುವ 1 : 8 (IRVKN)
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
ಯೆಹೋಶುವ 1 : 9 (IRVKN)
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು. [PS]
ಯೆಹೋಶುವ 1 : 10 (IRVKN)
{ಯೆಹೋಶುವನು ಜನರಿಗೆ ಕೊಟ್ಟ ಆದೇಶ} [PS] ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
ಯೆಹೋಶುವ 1 : 11 (IRVKN)
“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು. [PE][PS]
ಯೆಹೋಶುವ 1 : 12 (IRVKN)
ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
ಯೆಹೋಶುವ 1 : 13 (IRVKN)
“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
ಯೆಹೋಶುವ 1 : 14 (IRVKN)
ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
ಯೆಹೋಶುವ 1 : 15 (IRVKN)
ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
ಯೆಹೋಶುವ 1 : 16 (IRVKN)
ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
ಯೆಹೋಶುವ 1 : 17 (IRVKN)
ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
ಯೆಹೋಶುವ 1 : 18 (IRVKN)
ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು. [PE]
❮
❯