ಯೆಹೋಶುವ 11 : 1 (IRVKN)
ಕಾನಾನ್ ದೇಶದ ಉತ್ತರ ಭಾಗವು ಇಸ್ರಾಯೇಲರ ವಶವಾದದ್ದು ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,
ಯೆಹೋಶುವ 11 : 2 (IRVKN)
ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
ಯೆಹೋಶುವ 11 : 3 (IRVKN)
ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
ಯೆಹೋಶುವ 11 : 4 (IRVKN)
ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
ಯೆಹೋಶುವ 11 : 5 (IRVKN)
ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
ಯೆಹೋಶುವ 11 : 6 (IRVKN)
ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
ಯೆಹೋಶುವ 11 : 7 (IRVKN)
ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
ಯೆಹೋಶುವ 11 : 8 (IRVKN)
ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
ಯೆಹೋಶುವ 11 : 9 (IRVKN)
ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
ಯೆಹೋಶುವ 11 : 10 (IRVKN)
ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
ಯೆಹೋಶುವ 11 : 11 (IRVKN)
ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
ಯೆಹೋಶುವ 11 : 12 (IRVKN)
ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
ಯೆಹೋಶುವ 11 : 13 (IRVKN)
ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.
ಯೆಹೋಶುವ 11 : 14 (IRVKN)
ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
ಯೆಹೋಶುವ 11 : 15 (IRVKN)
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
ಯೆಹೋಶುವ 11 : 16 (IRVKN)
ಯುದ್ಧ ಫಲವು ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
ಯೆಹೋಶುವ 11 : 17 (IRVKN)
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
ಯೆಹೋಶುವ 11 : 18 (IRVKN)
ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.
ಯೆಹೋಶುವ 11 : 19 (IRVKN)
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
ಯೆಹೋಶುವ 11 : 20 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
ಯೆಹೋಶುವ 11 : 21 (IRVKN)
ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
ಯೆಹೋಶುವ 11 : 22 (IRVKN)
ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
ಯೆಹೋಶುವ 11 : 23 (IRVKN)
ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23