ಯೆಹೋಶುವ 13 : 1 (IRVKN)
ಸ್ವಾಧೀನವಾಗಬೇಕಿದ್ದ ಭೂಮಿ ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
ಯೆಹೋಶುವ 13 : 2 (IRVKN)
ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ
ಯೆಹೋಶುವ 13 : 3 (IRVKN)
ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,
ಯೆಹೋಶುವ 13 : 4 (IRVKN)
ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು
ಯೆಹೋಶುವ 13 : 5 (IRVKN)
ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;
ಯೆಹೋಶುವ 13 : 6 (IRVKN)
ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
ಯೆಹೋಶುವ 13 : 7 (IRVKN)
ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
ಯೆಹೋಶುವ 13 : 8 (IRVKN)
ಯೊರ್ದನಿನ ದಿಕ್ಕಿನಲ್ಲಿರುವ ಪ್ರದೇಶದ ವಿಭಜನೆ ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
ಯೆಹೋಶುವ 13 : 9 (IRVKN)
ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
ಯೆಹೋಶುವ 13 : 10 (IRVKN)
ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
ಯೆಹೋಶುವ 13 : 11 (IRVKN)
ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
ಯೆಹೋಶುವ 13 : 12 (IRVKN)
ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
ಯೆಹೋಶುವ 13 : 13 (IRVKN)
ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
ಯೆಹೋಶುವ 13 : 14 (IRVKN)
ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು * ಅಥವಾ ಅವರಿಗೆ. ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.
ಯೆಹೋಶುವ 13 : 15 (IRVKN)
ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
ಯೆಹೋಶುವ 13 : 16 (IRVKN)
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
ಯೆಹೋಶುವ 13 : 17 (IRVKN)
ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
ಯೆಹೋಶುವ 13 : 18 (IRVKN)
ಯಹಚಾ ಕೆದೇಮೋತ್, ಮೇಫಾಯತ್,
ಯೆಹೋಶುವ 13 : 19 (IRVKN)
ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,
ಯೆಹೋಶುವ 13 : 20 (IRVKN)
ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,
ಯೆಹೋಶುವ 13 : 21 (IRVKN)
ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
ಯೆಹೋಶುವ 13 : 22 (IRVKN)
ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.
ಯೆಹೋಶುವ 13 : 23 (IRVKN)
ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.
ಯೆಹೋಶುವ 13 : 24 (IRVKN)
ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
ಯೆಹೋಶುವ 13 : 25 (IRVKN)
ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,
ಯೆಹೋಶುವ 13 : 26 (IRVKN)
ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
ಯೆಹೋಶುವ 13 : 27 (IRVKN)
ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
ಯೆಹೋಶುವ 13 : 28 (IRVKN)
ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.
ಯೆಹೋಶುವ 13 : 29 (IRVKN)
ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
ಯೆಹೋಶುವ 13 : 30 (IRVKN)
ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
ಯೆಹೋಶುವ 13 : 31 (IRVKN)
ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.
ಯೆಹೋಶುವ 13 : 32 (IRVKN)
ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
ಯೆಹೋಶುವ 13 : 33 (IRVKN)
ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33