ಯೆಹೋಶುವ 14 : 1 (IRVKN)
ಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದು ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
ಯೆಹೋಶುವ 14 : 2 (IRVKN)
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
ಯೆಹೋಶುವ 14 : 3 (IRVKN)
ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
ಯೆಹೋಶುವ 14 : 4 (IRVKN)
ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
ಯೆಹೋಶುವ 14 : 5 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.
ಯೆಹೋಶುವ 14 : 6 (IRVKN)
ಕಾಲೇಬನ ಸ್ವತ್ತು ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
ಯೆಹೋಶುವ 14 : 7 (IRVKN)
ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
ಯೆಹೋಶುವ 14 : 8 (IRVKN)
ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
ಯೆಹೋಶುವ 14 : 9 (IRVKN)
ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
ಯೆಹೋಶುವ 14 : 10 (IRVKN)
ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
ಯೆಹೋಶುವ 14 : 11 (IRVKN)
ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
ಯೆಹೋಶುವ 14 : 12 (IRVKN)
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
ಯೆಹೋಶುವ 14 : 13 (IRVKN)
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
ಯೆಹೋಶುವ 14 : 14 (IRVKN)
ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
ಯೆಹೋಶುವ 14 : 15 (IRVKN)
ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
❮
❯
1
2
3
4
5
6
7
8
9
10
11
12
13
14
15