ಯೆಹೋಶುವ 15 : 1 (IRVKN)
ಯೆಹೂದ ಕುಲದ ಸ್ವತ್ತು ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.
ಯೆಹೋಶುವ 15 : 2 (IRVKN)
ಅದರ ದಕ್ಷಿಣದ ಮೇರೆಯು * ಮರಣ ಸಮುದ್ರ. ಲವಣ ಸಮುದ್ರದ ತೆಂಕಣ ಕೊನೆಯಿಂದ
ಯೆಹೋಶುವ 15 : 3 (IRVKN)
ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
ಯೆಹೋಶುವ 15 : 4 (IRVKN)
ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.
ಯೆಹೋಶುವ 15 : 5 (IRVKN)
ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
ಯೆಹೋಶುವ 15 : 6 (IRVKN)
ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,
ಯೆಹೋಶುವ 15 : 7 (IRVKN)
ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
ಯೆಹೋಶುವ 15 : 8 (IRVKN)
ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.
ಯೆಹೋಶುವ 15 : 9 (IRVKN)
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
ಯೆಹೋಶುವ 15 : 10 (IRVKN)
ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
ಯೆಹೋಶುವ 15 : 11 (IRVKN)
ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
ಯೆಹೋಶುವ 15 : 12 (IRVKN)
ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
ಯೆಹೋಶುವ 15 : 13 (IRVKN)
ಕಾಲೇಬನಿಗೆ ಕೊಡಲಾದ ಹೆಬ್ರೋನ್ ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
ಯೆಹೋಶುವ 15 : 14 (IRVKN)
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
ಯೆಹೋಶುವ 15 : 15 (IRVKN)
ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.
ಯೆಹೋಶುವ 15 : 16 (IRVKN)
ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
ಯೆಹೋಶುವ 15 : 17 (IRVKN)
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
ಯೆಹೋಶುವ 15 : 18 (IRVKN)
ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
ಯೆಹೋಶುವ 15 : 19 (IRVKN)
ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
ಯೆಹೋಶುವ 15 : 20 (IRVKN)
ಯೆಹೂದ ಕುಲದವರಿಗೆ ದೊರೆತ ನಗರಗಳು ಹಾಗು ಗ್ರಾಮಗಳು ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:
ಯೆಹೋಶುವ 15 : 21 (IRVKN)
ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
ಯೆಹೋಶುವ 15 : 25 (IRVKN)
ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,
ಯೆಹೋಶುವ 15 : 27 (IRVKN)
ಹಚರ್ ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
ಯೆಹೋಶುವ 15 : 28 (IRVKN)
ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
ಯೆಹೋಶುವ 15 : 30 (IRVKN)
ಎಲ್ಟೋಲದ್, ಕೆಸೀಲ್, ಹೊರ್ಮಾ,
ಯೆಹೋಶುವ 15 : 31 (IRVKN)
ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
ಯೆಹೋಶುವ 15 : 32 (IRVKN)
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,
ಯೆಹೋಶುವ 15 : 33 (IRVKN)
ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ
ಯೆಹೋಶುವ 15 : 36 (IRVKN)
ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
ಯೆಹೋಶುವ 15 : 37 (IRVKN)
ಚೆನಾನ್, ಹದಾಷಾ, ಮಿಗ್ದಲ್ಗಾದ್,
ಯೆಹೋಶುವ 15 : 38 (IRVKN)
ದಿಲಾನ್, ಮಿಚ್ಪೆ, ಯೊಕ್ತೇಲ್,
ಯೆಹೋಶುವ 15 : 39 (IRVKN)
ಲಾಕೀಷ್, ಬೊಚ್ಕತ್, ಎಗ್ಲೋನ್,
ಯೆಹೋಶುವ 15 : 40 (IRVKN)
ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್ದಾಗೋನ್, ನಾಮಾ,
ಯೆಹೋಶುವ 15 : 41 (IRVKN)
ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.
ಯೆಹೋಶುವ 15 : 44 (IRVKN)
ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
ಯೆಹೋಶುವ 15 : 45 (IRVKN)
ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.
ಯೆಹೋಶುವ 15 : 46 (IRVKN)
ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;
ಯೆಹೋಶುವ 15 : 47 (IRVKN)
ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.
ಯೆಹೋಶುವ 15 : 48 (IRVKN)
ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,
ಯೆಹೋಶುವ 15 : 49 (IRVKN)
ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,
ಯೆಹೋಶುವ 15 : 51 (IRVKN)
ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
ಯೆಹೋಶುವ 15 : 53 (IRVKN)
ಯಾನೂಮ್, ಬೇತ್ ತಪ್ಪೂಹ, ಅಫೇಕಾ,
ಯೆಹೋಶುವ 15 : 54 (IRVKN)
ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 57 (IRVKN)
ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 58 (IRVKN)
ಹಲ್ಹೂಲ್, ಬೇತ್ಚೂರ್, ಗೆದೋರ್,
ಯೆಹೋಶುವ 15 : 59 (IRVKN)
ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
ಯೆಹೋಶುವ 15 : 60 (IRVKN)
ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
ಯೆಹೋಶುವ 15 : 61 (IRVKN)
ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,
ಯೆಹೋಶುವ 15 : 62 (IRVKN)
ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
ಯೆಹೋಶುವ 15 : 63 (IRVKN)
ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63