ಯೆಹೋಶುವ 18 : 1 (IRVKN)
ಉಳಿದ ಪ್ರದೇಶಗಳ ಪಟ್ಟಿಯನ್ನು ಮಾಡಿದ್ದು
ಯೆಹೋಶುವ 18 : 2 (IRVKN)
ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.
ಯೆಹೋಶುವ 18 : 3 (IRVKN)
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
ಯೆಹೋಶುವ 18 : 4 (IRVKN)
ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
ಯೆಹೋಶುವ 18 : 5 (IRVKN)
ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
ಯೆಹೋಶುವ 18 : 6 (IRVKN)
ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.
ಯೆಹೋಶುವ 18 : 7 (IRVKN)
ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು
ಯೆಹೋಶುವ 18 : 8 (IRVKN)
ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.
ಯೆಹೋಶುವ 18 : 9 (IRVKN)
ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
ಯೆಹೋಶುವ 18 : 10 (IRVKN)
ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.
ಯೆಹೋಶುವ 18 : 11 (IRVKN)
ಬೆನ್ಯಾಮೀನ್ಯರ ಸ್ವತ್ತು ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
ಯೆಹೋಶುವ 18 : 12 (IRVKN)
ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
ಯೆಹೋಶುವ 18 : 13 (IRVKN)
ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
ಯೆಹೋಶುವ 18 : 14 (IRVKN)
ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.
ಯೆಹೋಶುವ 18 : 15 (IRVKN)
ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
ಯೆಹೋಶುವ 18 : 16 (IRVKN)
ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.
ಯೆಹೋಶುವ 18 : 17 (IRVKN)
ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
ಯೆಹೋಶುವ 18 : 18 (IRVKN)
ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
ಯೆಹೋಶುವ 18 : 19 (IRVKN)
ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
ಯೆಹೋಶುವ 18 : 20 (IRVKN)
ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.
ಯೆಹೋಶುವ 18 : 21 (IRVKN)
ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
ಯೆಹೋಶುವ 18 : 22 (IRVKN)
ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
ಯೆಹೋಶುವ 18 : 23 (IRVKN)
ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
ಯೆಹೋಶುವ 18 : 24 (IRVKN)
ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
ಯೆಹೋಶುವ 18 : 28 (IRVKN)
ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28