ಯೆಹೋಶುವ 19 : 1 (IRVKN)
{ಸಿಮೆಯೋನ್ ಕುಲದವರ ಸ್ವಾಸ್ತ್ಯ} [PS] ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
ಯೆಹೋಶುವ 19 : 2 (IRVKN)
ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೋಲಾದಾ,
ಯೆಹೋಶುವ 19 : 3 (IRVKN)
ಹಚರ್‌ ಷೂವಾಲ್, ಬಾಲಾ, ಎಚೆಮ್,
ಯೆಹೋಶುವ 19 : 4 (IRVKN)
ಎಲ್ತೋಲದ್, ಬೆತೂಲ್, ಹೊರ್ಮಾ,
ಯೆಹೋಶುವ 19 : 5 (IRVKN)
ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ,
ಯೆಹೋಶುವ 19 : 6 (IRVKN)
ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 19 : 7 (IRVKN)
ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 19 : 8 (IRVKN)
ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. [PE][PS] ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
ಯೆಹೋಶುವ 19 : 9 (IRVKN)
ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು. [PE][PS]
ಯೆಹೋಶುವ 19 : 10 (IRVKN)
ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
ಯೆಹೋಶುವ 19 : 11 (IRVKN)
ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.
ಯೆಹೋಶುವ 19 : 12 (IRVKN)
ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
ಯೆಹೋಶುವ 19 : 13 (IRVKN)
ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
ಯೆಹೋಶುವ 19 : 14 (IRVKN)
ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
ಯೆಹೋಶುವ 19 : 15 (IRVKN)
ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
ಯೆಹೋಶುವ 19 : 16 (IRVKN)
ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು. [PS]
ಯೆಹೋಶುವ 19 : 17 (IRVKN)
{ಇಸ್ಸಾಕಾರ್ ಕುಲದ ಸ್ವಾಸ್ತ್ಯ} [PS] ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
ಯೆಹೋಶುವ 19 : 18 (IRVKN)
ಇಜ್ರೇಲ್, ಕೆಸುಲ್ಲೋತ್, ಶೂನೇಮ್,
ಯೆಹೋಶುವ 19 : 19 (IRVKN)
ಹಫಾರಯಿಮ್, ಶೀಯೋನ್, ಅನಾಹರತ್,
ಯೆಹೋಶುವ 19 : 20 (IRVKN)
ರಬ್ಬೀತ್, ಕಿಷ್ಯೋನ್, ಎಬೆಜ್,
ಯೆಹೋಶುವ 19 : 21 (IRVKN)
ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.
ಯೆಹೋಶುವ 19 : 22 (IRVKN)
ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
ಯೆಹೋಶುವ 19 : 23 (IRVKN)
ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು. [PS]
ಯೆಹೋಶುವ 19 : 24 (IRVKN)
{ಆಶೇರ್ ಕುಲದವರ ಸ್ವಾಸ್ತ್ಯ} [PS] ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -
ಯೆಹೋಶುವ 19 : 25 (IRVKN)
ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,
ಯೆಹೋಶುವ 19 : 26 (IRVKN)
ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,
ಯೆಹೋಶುವ 19 : 27 (IRVKN)
ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು
ಯೆಹೋಶುವ 19 : 28 (IRVKN)
ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.
ಯೆಹೋಶುವ 19 : 29 (IRVKN)
ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.
ಯೆಹೋಶುವ 19 : 30 (IRVKN)
ಉಮ್ಮಾ, ಅಫೇಕ್‌, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 19 : 31 (IRVKN)
ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ. [PS]
ಯೆಹೋಶುವ 19 : 32 (IRVKN)
{ನಫ್ತಾಲಿ ಕುಲದವರ ಸ್ವಾಸ್ತ್ಯ} [PS] ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
ಯೆಹೋಶುವ 19 : 33 (IRVKN)
ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
ಯೆಹೋಶುವ 19 : 34 (IRVKN)
ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
ಯೆಹೋಶುವ 19 : 35 (IRVKN)
ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,
ಯೆಹೋಶುವ 19 : 36 (IRVKN)
ಆದಾಮಾ, ರಾಮಾ, ಹಾಚೋರ್,
ಯೆಹೋಶುವ 19 : 37 (IRVKN)
ಕೆದೆಷ್ ಎದ್ರೈ, ಏನ್ ಹಾಚೋರ್,
ಯೆಹೋಶುವ 19 : 38 (IRVKN)
ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
ಯೆಹೋಶುವ 19 : 39 (IRVKN)
ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ. [PS]
ಯೆಹೋಶುವ 19 : 40 (IRVKN)
{ದಾನ್ ಕುಲದವರ ಸ್ವಾಸ್ತ್ಯ} [PS] ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:
ಯೆಹೋಶುವ 19 : 41 (IRVKN)
ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,
ಯೆಹೋಶುವ 19 : 42 (IRVKN)
ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
ಯೆಹೋಶುವ 19 : 43 (IRVKN)
ಏಲೋನ್, ತಿಮ್ನಾ ಎಕ್ರೋನ್,
ಯೆಹೋಶುವ 19 : 44 (IRVKN)
ಎಲ್ತೆಕೇ, ಗಿಬ್ಬೆತೋನ್, ಬಾಲತ್,
ಯೆಹೋಶುವ 19 : 45 (IRVKN)
ಯೆಹುದ್, ಬೆನೇಬೆರಕ್, ಗತ್ ರಿಮ್ಮೋನ್,
ಯೆಹೋಶುವ 19 : 46 (IRVKN)
ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.
ಯೆಹೋಶುವ 19 : 47 (IRVKN)
ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.
ಯೆಹೋಶುವ 19 : 48 (IRVKN)
ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ. [PS]
ಯೆಹೋಶುವ 19 : 49 (IRVKN)
{ಯೆಹೋಶುವನ ಸ್ವಾಸ್ತ್ಯ} [PS] ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
ಯೆಹೋಶುವ 19 : 50 (IRVKN)
ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.
ಯೆಹೋಶುವ 19 : 51 (IRVKN)
ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51

BG:

Opacity:

Color:


Size:


Font: